ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಬೆಂಗಳೂರಿನ ವಿದ್ಯಾನಗರದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಖೇಲೋ ಇಂಡಿಯಾ ನಿಯಮನುಸಾರ ಸ್ಟೆçಂಥ್ ಆ್ಯಂಡ್ ಕಂಡಿಷನಿಂಗ್ ಎಕ್ಸರ‍್ಟ್ ಲೀಡ್, ಯಂಗ್ ಪ್ರೋಪೆಷನಲ್ ಹಾಗೂ ಮೆಸ್ ಗೌರವ ಧನದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಲಯದಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳನ್ನು ನೋಟರಿ ಮಾಡಿಸಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ನವೆಂಬರ್ ೧೬ರೊಳಗಾಗಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೧೦೮೫ ಹಾಗೂ ೭೦೧೯೦೦೮೪೪೩ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಯ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.