ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಬಯಸುವ ೧ನೇ ತರಗತಿಯಿಂದ ೧೦ನೇ ತರಗತಿ ವಿದ್ಯಾರ್ತಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ https:ssp.karnataka.gov.in CxÀªÁ www.sw.kar.nic.in ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿ ವಿದ್ಯಾರ್ಥಿ ಹಾಗೂ ಪಾಲಕ-ಪೋಷಕರ ಆಧಾರ ಸಂಖ್ಯೆ, ಮೊಬೈಲ್ ಸಂಖ್ಯೆ ರಾಷ್ಟ್ರೀಕೃತ ಅಥವಾ ಪೋಸ್ಟ್ ಆಫೀಸ್‌ನಲ್ಲಿ ತೆರೆಸಿದ ಖಾತೆ ಸಂಖ್ಯೆ, (ಆಧಾರ ಸೀಡಿಂಗ್ ಮಾಡಿಸಿರಬೇಕು) ಹಾಗೂ ತಹಶೀಲ್ದಾರರಿಂದ ನೀಡಲಾದ ಆರ್.ಸಿ.ಸಂಖ್ಯೆ ಹೊಂದಿದ ಜಾತಿ ಹಾಗೂ ಆದಾಯ ಪ್ರಮಾಣ ಪತ್ರದೊಂದಿಗೆ ದಿನಾಂಕ : ೨೦-೧೦-೨೦೨೩ರೊಳಗೆ ಅರ್ಜಿ ಸಲ್ಲಿಸಿ ಪ್ರಿಂಟ್ ತೆಗೆದು ಹಾರ್ಡ ಕಾಫಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ತಮ್ಮ ಶಾಲೆಯ ಮುಖ್ಯ ಶಿಕ್ಷಕರಿಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೦೦೩೦೩ ಅಥವಾ ಮೊ: ೯೪೮೦೮೦೪೩೦೮೫ ಸಂಖ್ಯೆಗೆ ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment