ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯ ವತಿಯಿಂದ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಕ್ರೀಡಾ ಸಾಧಕರಿಂದ ಅರ್ಜುನ ಪ್ರಶಸ್ತಿ, ರಾಷ್ಟೀಯ ಕ್ರೀಡಾ ಪೋಷಕ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ ಹಾಗೂ ಧ್ಯಾನ್ ಚಂದ್ ಖೇಲ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಕ್ರೀಡಾ ಸಾಧಕರು ವೆಬ್‌ಸೈಟ್ ತಿತಿತಿ.ಜbಣಥಿಚಿs.sಠಿoಡಿಣs.govನಲ್ಲಿ ಅಕ್ಟೋಬರ್ ೨೮ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೧೧-೨೩೩೮೭೪೩೨, ಉಚಿತ ಸಹಾಯವಾಣಿ ಸಂಖ್ಯೆ: ೧೮೦೦-೨೦೨-೫೧೫೫, ೧೮೦೦-೨೫೮-೫೧೫೫ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಯ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.