ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ವೀರ ಪರಿವಾರ ಸಹಾಯತಾ ಯೋಜನೆ-೨೦೨೫ರ ಅಡಿಯಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗೆ ಕಾನೂನು ಸಲಹೆಗಳನ್ನು ನೀಡಲು ಉಚಿತ ಕಾನೂನು ಸೇವೆಗಳ ಕ್ಲಿನಿಕ್‌ನ್ನು ಪ್ರಾರಂಭಿಸಲಾಗಿದೆ.
ಪ್ರತಿ ಗುರುವಾರ ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೫ಗಂಟೆಯವರೆಗೆ ವಕೀಲರಾದ ಜಾವೇದ್ ಎಸ್ ಗುಡಗಂಟಿ ಅವರು ಕಾನೂನು ಸೇವೆಗಳ ಕುರಿತು ಜಿಲ್ಲಾ ಸೈನಿಕ ಕಾರ್ಯಲಯದಲ್ಲಿ ಸಲಹೆ ನೀಡಲಿದ್ದು, ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.