ವಿಜಯಪುರ: ವಿಜಯಪುರದ ಸಿಕ್ಯಾಬ್ ಪದವಿಪುರ್ವ ಕಾಲೇಜ್‌ನಲ್ಲಿ ಇದೇ ಅ.೮ರಂದು ಐಎಎಸ್ & ಕೆಎಎಸ್ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಜರುಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ ಸೆಂಟರ್‌ಗಳು, ಇಂಟರನೆಟ್ ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
ಐಎಎಸ್-ಕೆಎಎಸ್ ಪೂರ್ವಭಾವಿ ತರಬೇತಿ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
Related Posts
Add A Comment