ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಕೇಸರಿ ಪಾರ್ಮರ್ ಪ್ರಡ್ಯೂಜರ್ ಕಂಪನಿ ಲಿಮಿಟೆಡ್ ವತಿಯಿಂದ ಇದೇ ದಿನಾಂಕ 22-10-25 ರ ಬುಧವಾರ ತಾಲ್ಲೂಕಿನ ಕಗ್ಗೋಡದಲ್ಲಿರುವ ಶ್ರೀ ರಾಮನಗೌಡ ಬಾಪುಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದ ಆವರಣದಲ್ಲಿರುವ ಶಿವಾನುಭವ ಮಂಟಪದ ಹತ್ತಿರ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಸಿದ್ದಸಿರಿಯ ಎಜಿಎಂ ಸಂತೋಷ ಗುಂಜುಟಗಿ ತಿಳಿಸಿದ್ದಾರೆ.
ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕದಲ್ಲಿ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗಾಗಿ ಖರೀದಿ ಕೇಂದ್ರ ಆರಂಭಿಸಲಾಗುತ್ತಿದೆ. ಮೆಕ್ಕೆಜೋಳ ತೇವಾಂಶ (ಮೈಸರ್) ಶೇ 15 ರೊಳಗೆ ಇರಬೇಕು. ಸುತ್ತಮುತ್ತಲಿನ ಗ್ರಾಮಗಳ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
