ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಚಿತ್ರದುರ್ಗ ಜಿಲ್ಲೆಯ ಚಳ್ಳಿಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಸಂಸ್ಕೃತ ವೇದ ಅಧ್ಯಯನ ಶಾಲೆಯಲ್ಲಿಯ ಶಿಕ್ಷಕನೊಬ್ಬ 9 ನೇ ತರಗತಿಯಲ್ಲಿ ಓದುತ್ತಿರುವ ಚಿಕ್ಕಮಗುವಿನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಮಗು ತನ್ನ ಅಜ್ಜಿಗೆ ಫೋನ್ ಕಾಲ್ ಮೂಲಕ ಮಾತನಾಡಿದ್ದಕ್ಕೆ ಮಗುವಿನ ಮೇಲೆ ಮೃಗದಂತೆ ಮೇಲೇರಗಿ ಕಾಲಿನಿಂದ ಮನಬಂದಂತೆ ಓದ್ದಿರುವ ಶಿಕ್ಷಕ ವಿರೇಶ ನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಅಧಿಕಾರಿಗಳಿಗೆ ಈ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ ಮತ್ತು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಇಂಥಹ ಮಾನವೀಯ ಕೃತ್ಯಗಳು ನಾಡಿನ ಯಾವುದೇ ಶಾಲೆಯ ವಸತಿ ನಿಲಯಗಳಲ್ಲಿ ಮರುಕಳಿಸದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಾಗಿದೆ. ಯಾರೇ ಮಕ್ಕಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದರೆ ಅಂತವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.

