ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ೨೦೨೫ರ ನ.೪ ರಿಂದ ೨೦೨೬ರ ಫೆ.೩ರವರೆಗೆ ೩ ತಿಂಗಳ ಜೇನುಗಾರಿಕೆ ತರಬೇತಿ ಹಮ್ಮಿಕೊಂಡಿದ್ದು, ತರಬೇತಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯಿಂದ ಓರ್ವ ರೈತ ಮಕ್ಕಳಿಗೆ ತರಬೇತಿ ಪಡೆಯಲು ಅವಕಾಶವಿದ್ದು, ಅರ್ಜಿಯನ್ನು ತೋಟಗಾರಿಕೆ ಜಂಟಿ ನಿರ್ದೇಶಕರು (ಜಿ.ಪಂ.) ವಿಜಯಪುರ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು ವಿಜಯಪುರ ಅಥವಾ ಇಲಾಖೆ ವೆಬ್‌ಸೈಟ್ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.೨೦, ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳು ೧೦ ರೂ. ಮೌಲ್ಯದ ಐಪಿಓ-ಡಿಡಿಯನ್ನು ಜಿಲ್ಲೆಯ ತೋಟಗಾರಿಕೆ ಜಂಟಿ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆ ಲಗತ್ತಿಸಿ ದಿನಾಂಕ : ೩೦-೧೦-೨೦೨೫ರೊಳಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಂಟಿ ನಿರ್ದೇಶಕರು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
