ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ಜಯಂತಿಗಳಂದು ಎಲ್ಲ ಸಮುದಾಯದವರು ಭಾಗವಹಿಸುವಂತಾಗಬೇಕು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಹೇಳಿದರು.
ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಜರುಗಿದ ರಾಣಿ ಚನ್ನಮ್ಮಳ ೨೪೭ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದು ಎಲ್ಲ ಸ್ವಾತಂತ್ರ್ಯ ಹೋರಾಟಗಾರರು, ಶರಣರು, ಮಹನೀಯರನ್ನು ಒಂದೊಂದು ಸಮುದಾಯಕ್ಕೆ ಸಿಮೀತಗೊಳಿಸುತ್ತಿರುವುದು ಖೇದಕರ. ಇಂಥ ರೂಢಿ ಬದಲಾಗಿ ಎಲ್ಲರೂ ಭಾಗವಹಿಸುವಂತಾಗಬೇಕು ಎಂದರು.
ತಾಲ್ಲೂಕು ಆಡಳಿತದಿಂದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಗುರುರಾಜ್ ಆಕಳವಾಡಿ ಮಾತನಾಡಿದರು. ನಂತರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಚನ್ನಮ್ಮಳಿಗೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು. ಆರಂಭದಲ್ಲಿ ಚನ್ನಮ್ಮಳ ವೃತ್ತನ್ನು ಸಿಂಗರಿಸಿ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಭಾವಚಿತ್ರಕ್ಕೆ ವಿದ್ಯುಕ್ತವಾಗಿ ಪೂಜೆ ಸಲ್ಲಿಸಲಾಯಿತು.
ತಹಶೀಲ್ದಾರ ಪ್ರಕಾಶ ಸಿಂದಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಉಪಾಧ್ಯಕ್ಷ ರಮೇಶ ಮಸಬಿನಾಳ, ಸದಸ್ಯ ಶಾಂತಯ್ಯ ಜಡಿಮಠ, ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾನಾಗೌಡ ಪಾಟೀಲ, ನಾಗೇಶ ನಾಗೂರ, ಚಂದ್ರಶೇಖರ ದಾನಗೊಂಡ, ವಿರೇಶ ಕುದರಿ, ಪಂಚಾಕ್ಷರಿ ಮಿಂಚನಾಳ, ವಿನೋದ ಚವ್ಹಾಣ, ಪ್ರಕಾಶ ಮಲ್ಲಾರಿ, ಕಾಶೀನಾಥ ರಾಮಗೊಂಡ, ಸೋಮು ದೇವೂರ, ರಾಜು ಹಳ್ಳದಗೆಣ್ಣೂರ, ಮಹಾಂತೇಶ ಬಿರಾದಾರ, ಮಡುಗೌಡ ಬಿರಾದಾರ(ಜಿರ್ಲಿ), ಹಾಗೂ ಸಮುದಾಯದ ಪ್ರಮುಖರು ಇದ್ದರು.

