Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ :ಡಿಕೆಶಿ
(ರಾಜ್ಯ ) ಜಿಲ್ಲೆ

ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ :ಡಿಕೆಶಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯತೀಂದ್ರ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಮಾತನಾಡಬೇಕಾದ ವ್ಯಕ್ತಿಯೊಂದಿಗೆ ಮಾತನಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ತಂದೆಯಂತೆಯೇ ಪ್ರಗತಿಪರ ಸೈದ್ಧಾಂತಿಕ ಚಿಂತನೆಯನ್ನು ಹೊಂದಿರುವ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, “ನಾನು ಈಗ ಮಾತನಾಡುವುದಿಲ್ಲ, ಆದರೆ ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದರು.
ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದ ಯತೀಂದ್ರ ಅವರಿಗೆ ನೋಟಿಸ್ ಏಕೆ ನೀಡುತ್ತಿಲ್ಲ ಎಂದು ಕೇಳಿದ ವರದಿಗಾರರ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಅವರು, “ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಇಂತಹ ಸಮಯದಲ್ಲಿ, ಪ್ರಗತಿಪರ ಚಿಂತನೆ ಹೊಂದಿರುವವರಿಗೆ, ಸೈದ್ಧಾಂತಿಕವಾಗಿ ಮಾರ್ಗದರ್ಶನ ನೀಡಲು ಮತ್ತು ಮುನ್ನಡೆಸಲು ಒಬ್ಬ ನಾಯಕನ ಅಗತ್ಯವಿದೆ” ಎಂದು ಹೇಳಿದ್ದರು.
ಯತೀಂದ್ರ ಹೇಳಿಕೆ ಬಗ್ಗೆ ಡಿಸಿಎಂ ಡಿಕೆಶಿ ಆಪ್ತ ಶಾಸಕರು ಅಸಮಾಧಾನ ಹೊರಹಾಕಿದ್ದು, ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಸಿಎಂ ಬದಲಾವಣೆ ಕುರಿತು ನಾವೇನಾದರೂ ಹೇಳಿಕೆ ಕೊಟ್ಟರೆ ನೋಟಿಸ್‌ ಕೊಡುತ್ತಾರೆ. ಅಂದರೆ ನಾವು ಮಾಡಿದ್ರೆ ಬಲಾತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ ಅನ್ನುವ ಪರಿಸ್ಥಿತಿ ಇದೆ ಎಂದಿದ್ದರು. ಚೆನ್ನಗಿರಿ ಶಾಸಕ ಶಿವಗಂಗ ಬಸವರಾಜ ಸಹ ಈ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.
ಇತ್ತೀಚೆಗೆ, ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆಗಾಗಿ ಇಬ್ಬರು ಕಾಂಗ್ರೆಸ್ ಶಾಸಕರಾದ ಎಚ್.ಡಿ. ರಂಗನಾಥ್ ಮತ್ತು ಎಚ್.ಎ. ಇಕ್ಬಾಲ್ ಹುಸೇನ್ ಅವರಿಗೆ ನೋಟಿಸ್ ನೀಡಲಾಗಿತ್ತು.
ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಯತೀಂದ್ರ ಅವರ ಹೇಳಿಕೆ ಅವರು ತಮ್ಮ ತಂದೆಯ ಉತ್ತರಾಧಿಕಾರಿಯ ಬಗ್ಗೆ ಮಾತನಾಡುತ್ತಿದ್ದಾರೆಯೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.