Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!

ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆ ಮಕ್ಕಳಿಗೆ ಅನುಕೂಲ
(ರಾಜ್ಯ ) ಜಿಲ್ಲೆ

ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆ ಮಕ್ಕಳಿಗೆ ಅನುಕೂಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅಭಿಮತ

ಉದಯರಶ್ಮಿ ದಿನಪತ್ರಿಕೆ

ದೇವರ ಹಿಪ್ಪರಗಿ: ಮಕ್ಕಳಿಗೆ ಒಳ್ಳೆ ಶಿಕ್ಷಣದ ಜೊತೆಗೆ ಒಳ್ಳೆ ಸಂಸ್ಕಾರವನ್ನು ನೀಡಿ ಅವರ ಭವಿಷ್ಯ ಉಜ್ವಲ ಆಗುವ ನಿಟ್ಟಿನಲ್ಲಿ ಸಿಬ್ಬಂದಿ  ಕಾರ್ಯನಿರ್ವಹಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರದ ವಸತಿ ನಿಲಯದ ನೂತನ ಕಟ್ಟಡ  ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗಾಗಿ ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ವಸತಿ ನಿಲಯಗಳನ್ನು ಮಾಡಿದೆ. ಇದರ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು. ನನ್ನ ಕ್ಷೇತ್ರದ ಪ್ರತಿಯೊಂದು ವಸತಿ ನಿಲಯಗಳಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿ, ನಿಮಗೆ ಬೇಕಾದ ಸಹಕಾರ ನಾನು ನೀಡುತ್ತೇನೆ. ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳಿಗೆ ಅನುಕೂಲವಾಗುತ್ತದೆ.

ನಿಕಟಪೂರ್ವ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವಧಿಯಲ್ಲಿ ಮತಕ್ಷೇತ್ರದ ಕಾಮನಕೇರಿ  ಗ್ರಾಮದಲ್ಲಿ ೭ ಕೋಟಿ ೭೫ ಲಕ್ಷದ ಕಟ್ಟಡ ಮಂಜೂರಾತಿಯಾಗಿದೆ. ಕೆಲವೇ ದಿನಗಳಲ್ಲಿ ಭೂಮಿಪೂಜೆ ಮಾಡಲಾಗುತ್ತಿದೆ. ಜೊತೆಗೆ ಅವಶ್ಯಕತೆ ಇರುವಲ್ಲಿ ವಸತಿ ನಿಲಯಗಳ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು. ನೂತನ ತಾಲೂಕ ಕೇಂದ್ರದಲ್ಲಿ ಪ್ರಜಾಸೌಧ ನಿರ್ಮಾಣವಾದರೆ ಎಲ್ಲ ಕಚೇರಿಗಳು ಒಂದೇಡೆ ಪ್ರಾರಂಭವಾಗುತ್ತವೆ. ಇದರಿಂದ ಕ್ಷೇತ್ರದ ಜನತೆಗೆ ಅನುಕೂಲವಾಗುತ್ತದೆ. ಅದಕ್ಕಾಗಿ ಸತತ  ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಮೌಲಾನ್ ಅಜಾದ್ ಶಾಲೆಗೆ ಮಂಜೂರಾತಿ ದೊರೆತಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
 
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಪಟ್ಟಣದಲ್ಲಿ ಸುಂದರ ಕಟ್ಟಡ ನಿರ್ಮಾಣಗೊಂಡಿದೆ ಇದರ ಸದುಪಯೋಗವನ್ನು ಇಲ್ಲಿ ಕಲಿಯುವ ಮಕ್ಕಳು ಪಡೆದುಕೊಂಡು ಬದುಕು ಸುಂದರಗೊಳಿಸಿಕೊಳ್ಳಬೇಕು ಎಂದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕಾಧಿಕಾರಿ ರವೀಂದ್ರ ಬಂಥÀನಾಳ. ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ ಯಲಗಾರ. ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ. ಕಾಶೀನಾಥ ಜಮಾದಾರ. ಸಿಂಧೂರ ಡಾಲೇರ. ನಿಲಯ ಮೇಲ್ವಿಚಾರಕ ನಾನಾಗೌಡ ಸಿದ್ದರೆಡ್ಡಿ, ನಿಲಯಪಾಲಕ ಎನ್.ಪಿ.ನಾಸಿ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದು ಮೇಲಿನಮನಿ, ಇಂಜನೀಯರ ಬಸವರಾಜ. ಪ್ರಕಾಶ ಮಲ್ಲಾರಿ. ಬಸವರಾಜ ದೇವಣಗಾಂವ, ಸೋಮು ದೇವೂರ. ವಿನೋದ ಚವ್ಹಾಣ, ಸೈಫನ್ ಮುಲ್ಲಾ. ಗಿರೀಶ ಕಟಕದೊಂಡ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!

ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 26, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ
    In (ರಾಜ್ಯ ) ಜಿಲ್ಲೆ
  • ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 26, 2026
    In ದಿನಪತ್ರಿಕೆ
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.