ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸ್ವಚ್ಛ ಭಾರತ ಮಿಷನ್-2.0ರ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ವತಿಯಿಂದ ಅಕ್ಟೋಬರ್ 26 ರಂದು ಸೈಕ್ಲೊಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಸೈಕ್ಲೊಥಾನ್ ಕಾರ್ಯಕ್ರಮವು ಅಂದು ಬೆಳಿಗ್ಗೆ 6.30 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಂಡು, ಗೋಲಗುಮ್ಮಟ, ಡಾ.ಬಿ.ಆರ್.ಅಂಬೇಡ್ಕರ ವೃತ್ತ, ಮಹಾತ್ಮಾ ಗಾಂಧಿ ವೃತ್ತ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್, ಶ್ರೀ ಬಿ.ಎಮ್.ಪಾಟೀಲ ವೃತ್ತ, ಬಿ.ಎಲ್.ಡಿ.ಇ.ಕ್ಯಾಂಪಸ್ ಲಿಂಗದ ಗುಡಿ, ಶ್ರೀ ಸಿದ್ದೇಶ್ವರ ದೇವಸ್ಥಾನ, ಮಹಾತ್ಮಾ ಗಾಂಧಿ ವೃತ್ತದಿಂದ ಸಂಚರಿಸಿ. ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ.
ನಗರದ ಯುವ ಸಮೂಹ, ಸಾರ್ವಜನಿಕರು ಈ ಸೈಕ್ಲೋಥಾನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಪ್ರಕಟಣೆಯಲ್ಲಿ ಕೋರಿದ್ದಾರೆ.

