ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ್
ಯತ್ನಾಳ್ ಹಲಾಲ್ ಪ್ರಮಾಣ ಪತ್ರ ಹೊಂದಿರುವ ಸಂಸ್ಥೆಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಸವಿವರವಾಗಿ ಪತ್ರ ಬರೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ಈಗಾಗಲೇ ಹಲಾಲ್ ಉತ್ಪನ್ನಗಳನ್ನು ನಿಷೇದಿಸಲಾಗಿದೆ, ಇದೆ ರೀತಿ ದೇಶಾದ್ಯಂತ ಹಲಾಲ್ ಉತ್ಪನ್ನಗಳು ಹಾಗೂ ಅದನ್ನು ಪ್ರಮಾಣೀಕರಿಸುವ ಸಂಸ್ಥೆಗಳು ನಿಷೇದವಾಗಬೇಕೆಂದು ಮಾನ್ಯ ಗೃಹ ಸಚಿವರಲ್ಲಿ ಆಗ್ರಹಿಸುತ್ತೇನೆ ಎಂದು ಪತ್ರ ಬರೆಯುವ ಮೂಲಕ ರಾಜ್ಯ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ.

