ವಿಜಯಪುರ: ವಿಜಯಪುರ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ವತಿಯಿಂದ ಸಚಿವರು, ಗಣಿ ಮತ್ತು ಭೂವಿಜ್ಞಾನ ಇಲಾಖೆ. ಹಾಗೂ ಪ್ರಧಾನ ಕಾರ್ಯದರ್ಶಿಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರಿಗೆ ಅಪರ ಜಿಲ್ಲಾಧಿಕಾರಿಗಳು, ವಿಜಯಪುರ ಇವರ ಮುಖಾಂತರ ಮನವಿ ಸಲ್ಲಿಸಲಾಯಿತು.
ವಿಜಯಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಅಕ್ರಮ ಮರಳುಗಾರಿಕೆ ಗಣಿಗಾರಿಕೆ ನಡೆಯುತ್ತಿದ್ದು. ವಿಜಯಪುರ ಜಿಲ್ಲೆ ೧೩ ತಾಲೂಕುಗಳಲ್ಲಿ ದೊಡ್ಡ ಜಿಲ್ಲೆಯಾಗಿದ್ದು ಜಿಲ್ಲೆಯಲ್ಲಿ ನಾಮಕಾವಸ್ಥೆ ಇಲಾಖೆಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇರುತ್ತದೆ. ಇಲಾಖೆಗೆ ಕಚೇರಿ ಸೇರಿದಂತೆ ಸಿಬ್ಬಂದಿಗಳ ಕೊರತೆ ವಾಹನಗಳ ಕೊರತೆ ವ್ಯಾಪಕ ಭ್ರಷ್ಟಾಚಾರದಿಂದ ಕೂಡಿದ ಇಲಾಖೆಯಾಗಿ ಪರಿವರ್ತನೆ ಆಗುತ್ತಿರುವುದು ಖೇದಕರ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಅತಿಯಾದ ಮರಳುಗಾರಿಕೆ ಜಲ್ಲಿಗಾರಿಕೆ ಗಣಿಗಾರಿಕೆ ವ್ಯಾಪಕವಾಗಿ ನಡೆದು ಸರ್ಕಾರದ ಬೊಕ್ಕಸಕ್ಕೆ ಅಪಾರ ಪ್ರಮಾಣದ ನಷ್ಟವನ್ನು ಉಂಟಾಗುತ್ತಿದೆ ಹೀಗಾಗಿ ಮಾನ್ಯರು ತಕ್ಷಣಕ್ಕೆ ಕ್ರಮ ಕೈಗೊಂಡು ಸಿಬ್ಬಂದಿಗಳ ನೇಮಕಾತಿ ಮಾಡಿ ಸೂಕ್ತ ವಾಹನಗಳನ್ನು ಒದಗಿಸಿ ಭ್ರಷ್ಟಾಚಾರ ಮುಕ್ತ ಸೇವೆಯನ್ನು ನೀಡುವಂತೆ ಆಗ್ರಹಿಸಲಾಯತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನೆ ಕಾರ್ಯದರ್ಶಿಯಾದ ಶಿವಾನಂದ ಯಡಹಳ್ಳಿ, ರಾಕೇಶ ಇಂಗಳಗಿ, ಹಮೀದ ಇನಾಮದಾರ, ಪ್ರವೀಣ ಕನಸೆ, ವಿಕ್ರಮ ವಾಗ್ಮೊರೆ, ಶ್ರೀಶೈಲ ಮಠ ಇನ್ನಿತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಗಣಿ-ಭೂವಿಜ್ಞಾನ ಇಲಾಖೆಗೆ ಮೂಲಸೌಕರ್ಯ ಒದಗಿಸಲು ಕೆಆರೆಸ್ ಪಾರ್ಟಿ ಆಗ್ರಹ
Related Posts
Add A Comment

