Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ನಿನ್ನಂತೆ ಕಾಡಿಲ್ಲ ಇನ್ನಾರು ನನ್ನ..!
ವಿಶೇಷ ಲೇಖನ

ನಿನ್ನಂತೆ ಕಾಡಿಲ್ಲ ಇನ್ನಾರು ನನ್ನ..!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಜಯಶ್ರೀ. ಜೆ. ಅಬ್ಬಿಗೇರಿ
ಇಂಗ್ಲೀಷ್ ಉಪನ್ಯಾಸಕರು ‘ಇಂಚರ’, ಪ್ಲಾಟ್ ನಂ – ೧೨೪,
ಚಂದ್ರಮೌಳಿ ಕಾಲೋನಿ
ಬೆಳಗಾವಿ-೧೭
ಮೊ: ೯೪೪೯೨೩೪೧೪೨

ಉದಯರಶ್ಮಿ ದಿನಪತ್ರಿಕೆ

ಜೀವದ ಗೆಳತಿ,
ನೆತ್ತಿ ಸುಡುವ ಸೂರ್ಯನ ಆರ್ಭಟವ ತಗ್ಗಿಸಲೆಂದೇ ಮಟ ಮಟ ಮಧ್ಯಾಹ್ನ ಸುರಿದ ಮಳೆ ಗಕ್ಕನೇ ನಿಂತಾಗ, ಆಗಸದಲ್ಲಿ ಕಾಮನಬಿಲ್ಲು ಮೈ ಅರಳಿಸಿಕೊಂಡು ತುಟಿ ಬಿರಿದು ನಿಂತಿತು. ಅದೇ ಕ್ಷಣ ಕಾಗದವನ್ನೇ ದೋಣಿಯಾಗಿಸಿ ನಾನು ನೀನು ಕೈ ಕೈ ಹಿಡಿದು ತೇಲಿ ಬಿಟ್ಟ ಗಳಿಗೆ ಅದೆಷ್ಟು ಮಧುರ ಅನುಭವ! ಅಲ್ಲವೇ ಗೆಳತಿ? ಅದನ್ನು ಮರೆಯಲಾದೀತೆ? ಹಾಲುಗಡಲು ಕಡೆಯುವಾಗ ಜನಿಸಿದ ಅಪ್ಸರೆಯಂತೆ ನಿನ್ನ ನೋಟ ಕಂಗೊಳಿಸುತ್ತಿರುವಾಗ ಗಗನದ ಮಳೆ ಬಿಲ್ಲು ನಸು ನಾಚಿ ಮರೆಯಾಯಿತು. ತಕ್ಷಣವೇ ಬಲು ಮೋಹಗೊಂಡು ನಿನ್ನ ಸುಕೋಮಲ ಬೆರಳಿಗೆ ಬೆರಳು ಬೆಸೆದೆ. ನಿನ್ನನ್ನು ಗೆಳತಿಯಾಗಿ ಪಡೆದು ಪರಿಪೂರ್ಣನಾದೆ ಎಂಬ ಭಾವದಲ್ಲಿ ಮಿಂದು ನನ್ನ ಹೃದಯ ಕುಣಿಯಿತು. ನಾನೇ ಭಾಗ್ಯವಂತ ನಾನೇ ಪುಣ್ಯವಂತ ನನಗರಿವಿಲ್ಲದೇ ಉಸಿರಿದೆ ಅದಕ್ಕೆ ನೀನು ಊಹ್ಞೂಂ ಇಲ್ಲ ನಾನೇ ಭಾಗ್ಯವತಿ ಎಂದದ್ದು ಇಂದಿಗೂ ಕಿವಿಯಲ್ಲಿ ಅನುರುಣಿಸುತ್ತಿದೆ. ಅರೆಗಳಿಗೆಯೂ ನಿನ್ನಿಂದ ದೂರಾಗಿ ಇರಲಾರೆ. ಎಂದೆನಿಸಿತು. ಆ ಕ್ಷಣವೇ ನಿನ್ನಲ್ಲಿ ಬೆರೆತು ನನ್ನöನ್ನೇ ಮರೆತು ಬಿಡಬೇಕೆಂದು ಹೃದಯ ವೀಣೆಯ ತಂತಿ ಹಠ ಹಿಡಿಯಿತು. ಯಾರಿಗೂ ಕಾಣದಂತೆ ಹೃದಯದಲ್ಲಿ ಮರೆ ಮಾಡಿ ನಿನ್ನನ್ನು ಮುಚ್ಚಿಟ್ಟುಕೊಂಡು ಬಂದು ನನ್ನ ಕೋಣೆ ಸೇರಿದೆ.


ನಾನೆಂದೂ ಕಾಣದ ಅನುಭವ ಮನದಲ್ಲಿ ಅಂದು ರಾತ್ರಿಯೆಲ್ಲ ಕಣ್ಣಿಗೆ ಕಣ್ಣು ಅಂಟಿಸಲು ಸಾಧ್ಯವಾಗಲೇ ಇಲ್ಲ. ನಿನ್ನನ್ನು ಕಾಣುವ ಮುನ್ನ ಈ ಕಣ್ಣುಗಳು ಅದೆಷ್ಟು ಸುಂದರಿಯರನ್ನು ಕಂಡಿವೆ ಲೆಕ್ಕವಿಲ್ಲ. ಆದರೆ ಆ ಯಾರೊಬ್ಬರಲ್ಲೂ ನಿನ್ನಂತೆ ಆಕರ್ಷಣೆಯ ಸೆಳೆತ ಇರಲಿಲ್ಲವೆಂತಲ್ಲ ಮನಸ್ಸು ಯಾಕೋ ಅತ್ತ ವಾಲಲೇ ಇಲ್ಲ. ತೆರೆದ ಬಾಹುಗಳ ಚಾಚಿ ಬಿಗಿದಪ್ಪುವಂತ ಕನಸು ಕಾಣಲೇ ಇಲ್ಲ. ಅದಾವ ಗಳಿಗೆಯಲ್ಲಿ ಸಂಚಾರಿ ಮನಸ್ಸು ನಿನ್ನ ಕಂಡು ಬೆಸೆದುಕೊಂಡಿತೋ ತಿಳಿಯಲಿಲ್ಲ. ನಿನ್ನ ಹೆಜ್ಜೆಯೊಂದಿಗೆ ಹೆಜ್ಜೆ ಬೆಸೆಯುವ ಕೆಲಸಕ್ಕೆ ಮನಸ್ಸು ದಿನವೂ ಜಾತಕ ಪಕ್ಷಿಯಂತೆ ಕಾಯುತ್ತಿತ್ತು. ನನ್ನ ಪ್ರತಿ ನೋವನ್ನು ನಿನ್ನದೆಂದೇ ತಿಳಿದು, ಮುಂದೆ ಮುಂದೆ ನಡೆ ನಾನೂ ನಿನ್ನೊಂದಿಗಿದ್ದೇನೆ ಎಂದು ಎದೆಗೆ ಧೈರ್ಯ ತುಂಬಿ,ಕಣ್ಣ ಕಂಬನಿ ಒರೆಸಿದ ಪರಿಯಲ್ಲಿ ಒಡಲ ಬಳ್ಳಿಯನ್ನು ಸಂತೈಸುವ ತಾಯಿ ಹೃದಯವನ್ನು ನಿನ್ನಲ್ಲಿ ಕಂಡು ಅಚ್ಚರಿಗೊಂಡೆ. . ನಮ್ಮ ಸ್ನೇಹವೆಂದೆಂದೂ ಇರಲಿ ಹೀಗೆ ಶಾಶ್ವತ ಎಂದು ನೀ ತುಟಿಯಂಚಿನಲ್ಲಿ ನಗುತ್ತ ಹೇಳಿದಾಗ ಇದ್ದ ಕೊಂಚ ಸಂಕೋಚವೂ ದೂರ ಓಡಿತು. ತುಂಟತನದ ಆಟಗಳಲ್ಲಿ ಮೈ ಮರೆತು ಪಟ್ಟ ಖುಷಿಗೆ ಲೆಕ್ಕವಿಲ್ಲ. ಪ್ರೀತಿಯೇ ಬದುಕು ಅದಿಲ್ಲದೇ ಬದುಕಿಲ್ಲ ಎಂದು ತೋರಿದವಳು ನೀನಲ್ಲವೇ? ನಿನ್ನೊಂದಿಗಿರುವ ಬದುಕು ಅದೆಷ್ಟು ಚೆಂದವಲ್ಲವೇ? ಗೆಳತಿ ನಿನ್ನಂತೆ ಇನ್ನಾರು ಕಾಡಿಲ್ಲ ನನ್ನ ನಿದ್ದೆಗೆಡಿಸಿಲ್ಲ ನನ್ನ. ಬಂದು ಬಿಡು ನನ್ನ ಬಳಿಗೆ ಈಗ. ಕೈಯಲ್ಲಿ ಕಾಗದದ ದೋಣಿ ಹಿಡಿದು ನಿಂತಿರುವೆ. ಮಳೆ ಬಿಲ್ಲೂ ನಿನ್ನ ಬರುವಿಗಾಗಿಯೇ ಕಾಯುತ್ತಿದೆ.
ನಿನ್ನ ಹೃದಯದ ರಾಜ
ಜಯರಾಜ್. ಜೆ. ಬೆಳಗಾವಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ ಮಹಿಳೆ :ಹಟ್ಟಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮಗಾಯನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.