ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ನಾಡು ನುಡಿ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು ಕನ್ನಡದ ಆಸ್ಮಿತೆಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಕನ್ನಡ ಭಾಷೆಯನ್ನ ಬಳಸಬೇಕು ಮತ್ತು ಬೆಳೆಸಬೇಕು. ಆ ನಿಟ್ಟಿನಲ್ಲಿ ನಾಡಿನ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನಾಡಿನ ಕನ್ನಡ ಮಾಧ್ಯಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದು 625 ಕ್ಕೆ 625 ಅಂಕ ಪಡೆದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ವಿಶೇಷವಾದ ಅಧ್ಯಯನ ಪ್ರವಾಸವನ್ನು ಏರ್ಪಡಿಸಿದೆ. ನವೆಂಬರ್ 14ರ ಒಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಸಾಧಕ ಮಕ್ಕಳು ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ತಿಳಿಸಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿರುವ ಸರಕಾರಿ ಶಾಲೆಗಳಲ್ಲಿ ಓದಿ ಸಾಧನೆ ಮಾಡಿರುವ ಕನ್ನಡ ಮಾಧ್ಯಮದ ಮಕ್ಕಳನ್ನು ಪ್ರೋತ್ಸಾಹಿಸುವುದು ಅಕಾಡೆಮಿಯ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.
ಅವರು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಅಕಾಡೆಮಿಯ ಅಧಿಕಾರಿಗಳಾದ ಶ್ರೀಮತಿ ಅನ್ನಪೂರ್ಣ ಸಂಗಳದ ಪುಷ್ಪ ಹಂಜಗಿ, ಸುಭಾಷ್ ಚಂದರಗಿ. ಸ್ವರ್ಣಲತಾ ಮಠದ, ಪದ್ಮಶ್ರೀ ಮೇಟಿ, ಅರ್ಪಿತಾ ಹೆಗಡಿ, ಅಶೋಕ್ ಬಸ್ತಿ ,ಶಿವಕುಮಾರ್ ದಿಂಡುರ , ಬಾಬುರಾವ ಮೊದಲಾದವರು ಉಪಸ್ಥಿತರಿದ್ದರು.

