ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯುಪಿಎಸ್ ನಾಗರೀಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ವಿಜಯಪುರ ನಗರದಲ್ಲಿ ನ.೮ ಹಾಗೂ ೯ ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ.
ನ.೮ ರಂದು ಗ್ರೂಪ್ ಸಿ ಪರೀಕ್ಷೆ ಪೂರ್ವ ತರಬೇತಿಗಾಗಿ ಹಾಗೂ ನವೆಂಬರ್ ೯ರಂದು ಯುಪಿಎಸ್ ನಾಗರಿಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆಯ್ಕೆಗಾಗಿ ನಗರದ ಗಾಂಧಿ ಚೌಕದಲ್ಲಿರುವ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿವೆ.
ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರ ಹಾಗೂ ಗುರುತಿನ ಚೀಟಿಯೊಂದಿಗೆ ಹಾಜರಾಗಯವಂತೆಯೂ, ಪ್ರವೇಶ ಪತ್ರವನ್ನು https;//sevasindhu.karnataka.gov.inಮೂಲಕ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಈ ಬಗ್ಗೆ ಯಾವುದೇ ಗೊಂದಲ ಉದ್ಭವಿಸಿದಲ್ಲಿ ಜಿಲ್ಲಾ ಕಚೇರಿಯನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಪ್ರಶಾಂತ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
