ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಿಸೆಂಬರ್ ೩ರಂದು ಆಚರಿಸಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನ.೧೧ರಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಯಲ್ಲಿ ಭಾಗವಹಿಸಿ, ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ಆವರಣದಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
