ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಪಜಾ ಅಭ್ಯರ್ಥಿಗಳಿಗಾಗಿ ಕೃಷಿ ಮೈಕ್ರೊಬಯೊಲಾಜಿ ಹಾಗೂ ಪ.ಪಂ ಅಭ್ಯರ್ಥಿಗಳಿಗಾಗಿ ಅಗ್ರಿಕಲ್ಚರಲ್ ಎಕಾನಾಮಿಕ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಲಾ ಒಂದು ಹುದ್ದೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನವೆಂಬರ್ ೨೫ರಂದು ಬೆಳಗ್ಗೆ ೧೧ ಗಂಟೆಗೆ ಕೃಷಿ ಮಹಾವಿದ್ಯಾಲಯದ ಡೀನ್ ಅವರ ಕಾರ್ಯಾಲಯದಲ್ಲಿ ಸಂದರ್ಶನ ನಡೆಯಲಿದೆ.
ಅಗತ್ಯ ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಕೃಷಿ ಮಹಾವಿದ್ಯಾಲಯದ ಡೀನ್ ಅವರ ಕಚೇರಿಯನ್ನು ಸಂಪರ್ಕಿಸುವಂತೆ ಮಹಾವಿದ್ಯಾಲಯದ ವಿದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
