ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯ ಕಾನೂನು ಶಾಲೆ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಇವರ ಸಹಯೋಗದಲ್ಲಿ “ಸೈಬರ್ ಕಾನೂನು ಮತ್ತು ಸೈಬರ್ ಅಪರಾಧಗಳ ಕುರಿತು ರಾಷ್ಟ್ರಮಟ್ಟದ ಸಮ್ಮೇಳನ-೨೦೨೫* ಕಾರ್ಯಕ್ರಮವನ್ನು ನಗರದ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯದ ಕೇಂದ್ರಿಯ ಗ್ರಂಥಾಲಯದ ಸಭಾಂಗಣದಲ್ಲಿ ನವೆಂಬರ್ ೦೭ ರಂದು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಇವರು, ಸಂಪನ್ಮೂಲ ವ್ಯಕ್ತಿಗಳಾಗಿ ಹೊಳೆನರಸೀಪುರದ ಸರಕಾರಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಕೆ ಮಾಟೊಳ್ಳಿ,ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಡಾ. ಸುನೀಲ್ ಬಗಾಡೆ ,ಬೆಂಗಳೂರಿನ ಸೈಬರ್ ಕ್ರೈಂ ವಿಭಾಗ, ಸಿ.ಐ.ಡಿ ವಿಭಾಗದ ಡಿ.ವೈ.ಎಸ್.ಪಿ ಯಶವಂತ ಕುಮಾರ,ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ಮತ್ತು ಆಡಳಿತ ಮಹಾವಿದ್ಯಾಲಯದ ಕಂಪ್ಯೂಟರ್ ಇಂಜಿನಿಯರ್ ವಿಭಾಗದ ಪ್ರಾಧ್ಯಾಪಕರಾದ ಡಾ. ಅನಂತ ಪ್ರಭು ಹಾಗೂ ವಿವಿಧ ರಾಜ್ಯದ ಕಾನೂನು ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ವಕೀಲರು, ವೈದ್ಯರು ಹಾಗೂ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ವಿಜಯಪುರದ ಕಾನೂನು ಶಾಲೆಯ ಪ್ರಾಂಶುಪಾಲರು ಹಾಗೂ ಡೀನ್ ಆದ ಡಾ.ರಘುವೀರ ಕುಲಕರ್ಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
