ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ನವೆಂಬರ್ 10 ರಿಂದ 15ರ ವರೆಗೆ ಆರು ದಿನಗಳ ಕಾಲ ಚರ್ಮ ರೋಗ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಪಂಚಕರ್ಮ ಚಿಕಿತ್ಸೆ ಶಿಬಿರ ನಡೆಯಲಿದೆ.
ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಸೋರಿಯಾಸಿಸ್ ಅಥವಾ ದೇಹದಲ್ಲಿ ಕೆಂಪು ಬಣ್ಣದ ಕಲೆಗಳು, ತೀವ್ರ ತುರಿಕೆ , ಬಿಳಿ ಹೊಟ್ಟು ಉದುರುವಿಕೆಯಂಥ
ಚರ್ಮರೋಗ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ತಪಾಸಣೆ ಮತ್ತು ಚಿಕಿತ್ಸೆ ಪಡೆಯಬಹುದಾಗಿದೆ.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಯುರ್ವೇದ ಹೈಟೆಕ್ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೈದ್ಯ ಡಾ. ಸ್ಮಿತಾ ಚೌಧರಿ ಮೊ. ನಂ. 89046070881 ಮತ್ತು 9513397413 ಸಂಪರ್ಕಿಸಬಹುದಾಗಿದೆ.
