Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಿಸಿ :ಉಮೇಶ
(ರಾಜ್ಯ ) ಜಿಲ್ಲೆ

ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಿಸಿ :ಉಮೇಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ನೇತೃತ್ವದ ನಿಯೋಗದಿಂದ ಜಿಲ್ಲಾಧಿಕಾರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಣೆ ಮಾಡುವುದು, ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವುದು ಹಾಗೂ ಕೋನೋ ಕಾರ್ಪಸ್ ಗಿಡಗಳನ್ನು ನಿಷೇಧಿಸುವುದು ಸೇರಿದಂತೆ ವಿಜಯಪುರ ಜನತೆ ಎದುರಿಸುತ್ತಿರುವ ವಿವಿಧ ಮಹತ್ವದ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ನೇತೃತ್ವದ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ವಿಜಯಪುರ ಜನತೆಯ ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ, ವಿಜಯಪುರ ನಗರದಲ್ಲಿ ಭೂಕಂಪನಗಳು ಮರುಕಳಿಸುತ್ತಲೇ ಇವೆ, ೨೦೨೧ರಿಂದ ೨೦೨೫ ನವೆಂಬರ್ ೪ರ ವರೆಗೆ ೫೪ ಸಲ ಲಘು ಭೂಕಂಪನ ಸಂಭವಿಸಿದೆ. ೨೦೨೫ರಲ್ಲಿ ೬ ಭಾರಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕನಿಷ್ಠ ೧.೨ ರಿಂದ ಗರಿಷ್ಠ ೪.೪ ವರೆಗೂ ತೀವ್ರತೆ ದಾಖಲಾಗಿದೆ. ಇದರಿಂದ ಜನತೆ ಆತಂಕಗೊAಡಿದ್ದಾರೆ, ಕೂಡಲೇ ಸಾರ್ವಜನಿಕರ ಆತಂಕ ದೂರ ಮಾಡಲು ತಜ್ಞರ ತಂಡ ಕರೆಯಿಸಬೇಕು ಎಂದು ಒತ್ತಾಯಿಸಿದರು.
ನಗರದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದೆ, ಚಿಕ್ಕ ಮಕ್ಕಳು, ಮಹಿಳೆಯರು, ವೃದ್ದರು ಅನೇಕರಿಗೆ ಬೀದಿ ನಾಯಿಗಳು ಕಡಿದು ಗಾಯಗೋಳಿಸಿವೆ, ಎಲ್ಲಿಯ ಬಡಾವಣೆಗೂ ಹೋದರೂ ಅಲ್ಲಿ ಹತ್ತಿಪ್ಪತ್ತು ನಾಯಿಗಳ ಗುಂಪು ಇದ್ದೇ ಇರುತ್ತದೆ, ವಿಜಯಪುರ ಜಿಲ್ಲೆಯಲ್ಲಿಯೇ ರಾಜ್ಯದಲ್ಲಿಯೇ ಅಧಿಕ ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ, ನಾವು ಶ್ವಾನಗಳ ವಿರೋಧಿಗಳಲ್ಲ, ಶ್ವಾನಗಳಿಗೆ ಈ ರೀತಿ ಬೀದಿಯಲ್ಲಿ ಬಿಡುವುದಕ್ಕಿಂತ ಸೂಕ್ತ ರೀತಿಯಲ್ಲಿ ಶೆಲ್ಟರ್ ಮಾಡಿ ಅವುಗಳಿಗೆ ಸೂಕ್ತ ಆಹಾರ, ಔಷಧ, ಲಸಿಕೆ ನೀಡುವ ಕಾರ್ಯ ಮಾಡಬೇಕು, ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ಈಗಾಗಲೇ ಡಾಗ್ ಶೆಲ್ಟರ್ ನಿರ್ಮಾಣಕ್ಕೆ ೨ ಕೋಟಿ ರೂ. ಅನುದಾನ ನೀಡಿದ್ದು, ಕೂಡಲೇ ಈ ಕಾರ್ಯ ಪೂರ್ಣಗೊಳಿಸುವಂತೆ ಕಾರಜೋಳ ಒತ್ತಾಯಿಸಿದರು.
ಇನ್ನೂ ನಗರದ ಎಪಿಎಂಸಿ ಆವರಣಲ್ಲಿ ಅಗ್ನಿ ನಂದಿಸುವ ಇನ್ನೊಂದು ವಾಹನ ನಿಲುಗಡೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯನ್ನು ಜಿಲ್ಲಾಧಿಕಾರಿಗಳ ಮುಂದಿರಿಸಿದರು. ಅಥಣಿ ರಸ್ತೆಯ ಬಳಿ ಇರುವ ಅಗ್ನಿಶಾಮಕ ದಳದ ಠಾಣೆಯಿಂದ ಅಗ್ನಿಶಾಮಕ ದಳ ವಾಹನಗಳು ಗೋಳಗುಮ್ಮಟ, ಆಶ್ರಮ ಸೇರಿದಂತೆ ನಗರ ಭಾಗದಲ್ಲಿ ಅಗ್ನಿ ಅನಾಹುತ ಸಂಭವಿಸಿದಾಗ ರಕ್ಷಣೆಗೆ ಧಾವಿಸಲು ಸಮಯ ಬೇಕು, ಹೀಗಾಗಿ ನಗರದ ಹೃದಯಭಾಗದಲ್ಲಿ ಎಪಿಎಂಸಿ ಆವರಣಲ್ಲಿ ಇನ್ನೊಂದು ಅಗ್ನಿಶಾಮಕ ದಳದ ವಾಹನವನ್ನು ಸ್ಟ್ಯಾಂಡ್ ಬೈ ರೂಪದಲ್ಲಿ ನಿಲ್ಲಿಸಬೇಕು ಎಂದರು.
ವಿಷಕಾರಿಯಾದ ಕೋನೋ ಕಾರ್ಪಸ್ ಗಿಡಗಳನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು, ಈ ಮಾದರಿಯ ಎಂಬ ವಿಷಕಾರಿ ಸಸಿಗಳನ್ನು ಹಲವು ಕಡೆ ನೆಡಲಾಗಿದೆ, ಈ ತೆರನಾದ ಸಸಿಗಳಿಂದ ಅಪಾಯವಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿ ಸರ್ಕಾರಕ್ಕೂ ಸಹ ಪತ್ರ ಬರೆದಿದ್ದಾರೆ.
ಈ ಸಸಿ ಬಿಡುವ ಹೂವಿನಿಂದ ಹಿಟಮೈನ್ ಎಂಬ ಅಂಶ ಬಿಡುಗಡೆಯಾಗಿ ಅಸ್ತಮಾ ಮೊದಲಾದ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈ ಸಸಿಯ ಬೇರುಗಳು ಭೂಮಿ ಆಳದಲ್ಲಿ ವ್ಯಾಪಿಸುವುದರಿಂದ ನೀರಿನ ಶೆಲೆಗಳು ಸಹ ಬಂದ್ ಆಗಿ ಅಂತರ್ಜಲ ಮಟ್ಟ ಸಹ ಕುಸಿಯುತ್ತಾ ಸಾಗುತ್ತದೆ, ಕೂಡಲೇ ಈ ಸಸಿಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ಕೃಷ್ಣಾ ಗುನ್ನಾಳಕರ್, ಆನಂದ ಕುಲಕರ್ಣಿ, ಬಸವರಾಜ ಬೈಚಬಾಳ, ಸಂದೀಪ ಪಾಟೀಲ, ವಿರೇಶ ಗೊಬ್ಬೂರ, ಕುಮಾರ ಕಟ್ಟಿಮನಿ, ಚಿನ್ನುಚಿನಗುಂಡಿ, ಸುನಂದಾ ಪಾಟೀಲ ನಿಯೋಗದಲ್ಲಿದ್ದರು.

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಹೊಟೇಲ್ ಸಂಘ ರೂ.1.50 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್:ಮಾಹಿತಿ ಪ್ರಕಟಿಸಿದ ರನ್ ಕೋರ್ ಕಮಿಟಿ
    In (ರಾಜ್ಯ ) ಜಿಲ್ಲೆ
  • ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ
    In ವಿಶೇಷ ಲೇಖನ
  • ಮಣ್ಣು; ರೈತರ ಸಿರಿ ಸಂಪತ್ತು
    In ವಿಶೇಷ ಲೇಖನ
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.