ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಿಜಯಪುರ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಪತ್ರಕರ್ತ ಅವಿನಾಶ ಬಿದರಿ ಆಯ್ಕೆಯಾಗಿದ್ದಾರೆ.
2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಅವಿನಾಶ ಬಿದರಿ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ರವಿವಾರ ಸಂಜೆ ಪ್ರಮಾಣ ಪತ್ರ ವಿತರಿಸಿದರು.
ಇದೇ ಸಂದರ್ಭದಲ್ಲಿ ಕುಟುಂಬ ವರ್ಗದವರು, ಸ್ನೇಹಿತರು ಹಾಗೂ “ಉದಯರಶ್ಮಿ” ಪತ್ರಿಕಾ ಬಳಗ ಅವಿನಾಶ ಬಿದರಿ ಅವರಿಗೆ ಅಭಿನಂದಿಸಿದ್ದಾರೆ.

