ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೇಸ್ ಸಮೀತಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಮಡ್ಡೀಮನಿ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಿಗೆ ಪತ್ರ ಬರೆದಿದ್ದಾರೆ.
೧೫ ನೇ ಹಣಕಾಸು ಯೋಜನೆ ಅಡಿ ೪ ಕಾಮಗಾರಿಗಳ ಹಣವನ್ನು ದುರುಪಯೋಗ ಮಾಡಿದ್ದು ಕಂಡು ಬಂದಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ತಾ.ಪಂ ಇಓ ಅವರಿಗೆ ಪತ್ರ ಬರೆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ೧೫ ಹಣಕಾಸು ಹಣ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಡ್ಡೀಮನಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
