ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಶಿಕ್ಷಣವು ವ್ಯಕ್ತಿಯ ಬದುಕಿನಲ್ಲಿ ಬೆಳಕು ತರಬಲ್ಲ ಶಕ್ತಿ. ಅದು ಸಮಾಜದ ಪ್ರಗತಿಗೆ ಮೂಲಾಧಾರವಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪಿಯು ವಿಭಾಗದ ಆಡಳಿತಾಧಿಕಾರಿ ಪ್ರೊ. ಅಶೋಕ ಲಿಂಮಕರ ಹೇಳಿದರು.
ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನದಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ದಿನ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಮಹತ್ವವನ್ನು ಉಲ್ಲೇಖಿಸಿದ ಅವರು, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಶಿಕ್ಷಣ ಕ್ಷೇತ್ರದ ಕೊಡುಗೆಗಳನ್ನು ಸ್ಮರಿಸಿದರು. ಯುವ ಪೀಳಿಗೆಯು ಅವರ ಆದರ್ಶಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಎ.ವಿ ಸೂರ್ಯವಂಶಿ ಮಾತನಾಡಿದರು. ಮಹಾವಿದ್ಯಾಲಯದ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಇದ್ದರು.

