ಉದಯರಶ್ಮಿ ದಿನಪತ್ರಿಕೆ
ಆಲಮೇಲ: ವಿಶ್ವೇಶ್ವರ ಬಾಲ ಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುವ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷರು ಎಸ್.ಐ. ಜೋಗುರ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಮಾತನಾಡುತ್ತಾ ವಿದ್ಯಾರ್ಥಿಗಳ ಸಾಧನೆಯು ಅಭಿನಂದನರ್ಹವಾಗಿದೆ, ಅವರ ಕಠಿಣ ಪರಿಶ್ರಮ ಹಾಗೂ ನಿರಂತರ ಪ್ರಯತ್ನದ ಫಲವಾಗಿ ಉತ್ತಮ ಆಟ ಆಡಿ ಉತ್ತಮ ಕ್ರೀಡಾಪಟೂಗಳಾಗಿ ಹೊರ ಹೊಮ್ಮಿದ್ದಾರೆ. ಈ ವಿದ್ಯಾರ್ಥಿಗಳ ಏಕಾಗ್ರತೆ ಇವರ ಸಾಧನೆಯ ಮೂಲಮಂತ್ರ ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಇವರ ಸಾಧನೆಯನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆದ ವಿದ್ಯಾರ್ಥಿಗಳಾದ ಸಾಕ್ಷಿ ಬಬಲೇಶ್ವರ , ಅಭಿಷೇಕ ಕೊಬ್ರೆ,ಮಹಾದೇವ ಮಡಿವಾಳ ಹಾಗೂ ಕ್ರೀಡಾ ಮಾರ್ಗದರ್ಶನ ಮಾಡಿದ ದೈಹಿಕ ಶಿಕ್ಷಕಿಯರಾದ ಸೀತಾ ಆರೇಶಂಕರ ರವರನ್ನು ಸನ್ಮಾನಿಸಲಾಯಿತು.
ಈ ವೇಳೆ ಸಂಸ್ಥೆಯ ಕೋಶಾಧ್ಯಕ್ಷರು ಅರವಿಂದ ಕುಲಕರ್ಣಿ, ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ, ಚಂದ್ರಕಾಂತ ದೇವರಮನಿ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸುನೀತಾ ಗುಂಡದ , ವೀಣಾ ರಾಂಪೂರಮಠ, ಲಕ್ಷ್ಮೀ ಗುಣಾರಿ ಮುಂತಾದವರು ಉಪಸ್ಥಿತರಿದ್ದರು

