ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನ.8 ಮತ್ತು 9 ರಂದು ವಿಜಯಪುರ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಶಿಯೇಶನ ಹಾಗೂ ಸ್ಥಳೀಯ ಬಸವ ಸ್ಪೋರ್ಟ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಎರಡು ದಿನದ ಬಾಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಜರುಗಿತು.
ತರಬೇತಿ ನೀಡಲು ಆಗಮಿಸಿದ್ದ ಕೊಪ್ಪಳದ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರ ಈಶ್ವರ ಬೊಮ್ಮನಾಳ, ಬೆಂಗಳೂರಿನ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರ ಚಂದ್ರಶೇಖರ್ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರ ಈರಣ್ಣ ಅವಟಿ ಶಿಬಿರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಈಶ್ವರ ಬೊಮ್ಮನಾಳ ಮಾತನಾಡಿ, ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು. ಬೆಳೆಯುವ ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಪೂರಕವಾಗಿದೆ. ಉತ್ತಮ ಕ್ರೀಡಾಪಟುಗಳಾಗಲು ತರಬೇತಿ ಅಗತ್ಯ ಎಂದರು.
ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರರಾದ ಈರಣ್ಣ ಅವಟಿ ಸ್ಥಳೀಯ ಆಟಗಾರ ವಿನಾಯಕ ಬಿ ಇತರರು ಇದ್ದರು.
ಶಿಬಿರದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ 40 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 2 ದಿನಗಳ ಕಾಲ ತರಬೇತಿ ನೀಡಲಾಯಿತು. ಕ್ರೀಡಾಪಟುಗಳ ಆಸಕ್ತಿಗನುಗುಣವಾಗಿ ಬಾಲ್ ಬ್ಯಾಡ್ಮಿಂಟನ್ ನುರಿತ ತರಬೇತಿದಾರರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯ ತನಕ ತರಬೇತಿ ನೀಡಲಾಯಿತು

