ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ವಿಜಯಪುರದ ಡಾ ಬಿ.ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಜಯಪುರ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಅಕೀಲಮ್ಮದ ಉಪ್ಪಲದಿನ್ನಿ ಭಾಗವಹಿಸಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಅದೇ ರೀತಿ ದಾನಮ್ಮ ಕರಿಗಾರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾಳೆ. ಇವರಿರ್ವರ ಸಾಧನೆಯನ್ನು ಕಂಡು ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಿ.ಯು. ಗಿಡ್ಡಪ್ಪಗೋಳ, ಕಾರ್ಯದರ್ಶಿ ಎಸ್.ಬಿ. ಪತಂಗಿ ಹಾಗೂ ನಿರ್ದೇಶಕರಾದ ವಿನೀತ ದೇಸಾಯಿ, ಎನ್.ಕೆ. ಮೇಲಗಿರಿ, ಎಸ್.ಜಿ. ಗಿಡ್ಡಪ್ಪಗೋಳ, ಎಸ್.ಸಿ. ಕುಂಬಾರ, ಸಿ.ಎಸ್. ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಎಸ್.ಎಂ ಶೀಲವಂತ ಮತ್ತು ಶಾಲೆಯ ಮುಖ್ಯ ಶಿಕ್ಷಕ ರಾಜಶೇಖರ ಉಮರಾಣಿ, ದೈಹಿಕ ಶಿಕ್ಷಕಿ ಧನಶ್ರೀ ಭಾರಸ್ಕಳ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

