ದೇವರಹಿಪ್ಪರಗಿ: ಸಮಾಜದ ಪರಿವರ್ತನೆ ಹಾಗೂ ಕುಟುಂಬದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಹಿರಿದಾದುದಾಗಿದೆ ಎಂದು ಸದಯ್ಯನಮಠದ ವೀರಗಂಗಾಧರಶ್ರೀಗಳು ಹೇಳಿದರು.
ಪಟ್ಟಣದ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ದೇವರಹಿಪ್ಪರಗಿ ಹಾಗೂ ಜಾಲವಾದ ವಲಯಗಳ ಅಡಿಯಲ್ಲಿ ಜರುಗಿದ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಹಿಳೆ ಮನೆಯ ಮಗಳಾಗಿ, ಒಡತಿಯಾಗಿ, ಸೊಸೆಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ದುಶ್ಚಟಗಳಿಗೆ ಬಲಿಯಾದ ಸಹೋದರ, ಗಂಡ ಸೇರಿದಂತೆ ಮನೆಯ ಸದಸ್ಯನ ಜವಾಬ್ದಾರಿ ನಿರ್ವಹಿಸಿ ಮನೆಯ ನಿರ್ವಹಣೆಯ ಜೊತೆಗೆ ಅವರು ಸರಿಯಾದ ಮಾರ್ಗದಲ್ಲಿ ಸಾಗಲು ಸಹಕಾರ ನೀಡುತ್ತಾಳೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು.
ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರಾದ ಪಂಚಾಕ್ಷರಿ ಮಿಂಚನಾಳ ಮಾತನಾಡಿ, ಜೀವನದಲ್ಲಿ ಉತ್ತಮ ಹವ್ಯಾಸಗಳು ಹಾಗೂ ದುಶ್ಚಟಗಳ ಪಾತ್ರದ ಕುರಿತು ವಿವರಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಎಎಸ್‌ಐ ಕೆ.ಎಚ್.ಉಪ್ಪಾರ, ಸಂಗನಗೌಡ ಪಾಟೀಲ, ಯೋಜನಾಧಿಕಾರಿ ಗಿರೀಶಕುಮಾರ.ಎಂ ಸೇರಿದಂತೆ ಸ್ವಸಹಾಯ ಸಂಘಗಳ ಮಹಿಳೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

