ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಾ ಪಂಚಾಯತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ತಾಲೂಕಾ ಪಂಚಾಯತಿಯ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದ ಅವರು, ಕಚೇರಿಗೆ ವಿವಿಧ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಕಾರ್ಯಕ್ಕಾಗಿ ವಿಳಂಭ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು. ಎಲ್ಲ ಅಧಿಕಾರಿ-ಸಿಬ್ಬಂದಿಗಳು ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನಂತರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಾದ ಪ್ರಯೋಗಾಲಯ, ರಕ್ತ ಶೇಖರಣೆ ಕೇಂದ್ರ, ಡಯಾಲಸಿಸ್, ನೋಂದಣಿ ವಿಭಾಗ, ಆಪರೇಷನ್ ಕೊಠಡಿ, ಚಿಕ್ಕಮಕ್ಕಳ ಪ್ರಸೂತಿ ಕೇಂದ್ರ, ಹೀಗೆ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮತ್ತು ಆಸ್ಪತ್ರೆಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳ ಕುರಿತು ಪಂಚಾಯತ ರಾಜ್ ಇಂಜಿನಿಯರ ವಿಭಾಗಕ್ಕೆ ಬೇಡಿಕೆ ಸಲ್ಲಿಸುವಂತೆ ತಾಲೂಕ ಅರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆಯಲ್ಲಿ ನೋಂದಣಿಯಾದ ರೋಗಿಗಳ ಜೊತೆ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ದಾಖಲಾದ ರೋಗಿಗಳಿಂದ ಮತ್ತು ರೋಗಿಗಳ ಪಾಲಕರೊಡನೆ ಚರ್ಚೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು. ಹಾಗೂ ಆರೋಗ್ಯ ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಯುವರಾಜ ಹನಗಂಡಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್ ಎಸ್ ಒತಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ :ಜಿಪಂ ಸಿಇಓ ಶಿಂಧೆ
Related Posts
Add A Comment