ಡೆಂಗೀ ರಥ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆ
ವಿಜಯಪುರ: ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿಗಳ ಕಾರ್ಯಾಲಯ ವಿಜಯಪುರ ವತಿಯಿಂದ ಆಯೊಜಿಸಲಾಗಿರುವ ಡೆಂಗೀ ರಥ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡೆಂಗೀ ರೋಗ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯವಾಗಿದೆ. ಸಾರ್ವಜನಿಕರೂ ಸಹ ತಮ್ಮ ಅಕ್ಕ-ಪಕ್ಕದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಡೆಂಗೀ ರೋಗ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ರೋಗ ಕುರಿತು ಜಾಗೃತಿ ಮೂಡಿಸಲು ರಥ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಈ ರಥ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ ಮಾತನಾಡಿ, ಡೆಂಗೀ ಜಾಗೃತಿ ರಥವು ಜಿಲ್ಲೆಯ ಎಲ್ಲ ಕಡೆ ಸಂಚರಿಸಿ ಡೆಂಗೀ ರೋಗ ಲಕ್ಷಣಗಳು ರೋಗ ಬರುವ ಕುರಿತು ರೋಗ ಬಾರದಂತೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಿದೆ ಸಾರ್ವಜನಿಕರು ಇದರ ಕುರಿತು ತಿಳಿದುಕೊಂಡು ಡೆಂಗೀ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕರೆ ನೀಡಿದರು.
ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿ ಜೆಬುನ್ನಿಸಾಬೇಗಂ ಬೀಳಗಿ ಮಾತನಾಡಿದರು.
ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಕೆ.ಡಿ.ಗುಂಡಬಾವಡಿ ಜಿಲ್ಲಾ ಸರ್ವೆಕ್ಷಣಾಧಿಕಾರಿಗಳಾದ ಡಾ. ಕವಿತಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ವರಿ ಗೊಲಗೆರಿ ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಸಂಪತ ಗುಣಾರಿ ತಾಲೂಕಾ ಆರೋಗ್ಯಾಧಿಕಾರಿ ಪಿ.ಎ.ಹಿಟ್ನಳ್ಳಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಂ ಕೊಲೂರ ಉಪ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸುರೇಶ ಹೊಸಮನಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.