ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕಿನ ತಡವಲಗಾ ಗ್ರಾಮದ ಗಣೇಶ ನಗರದ ಶ್ರೀ ಶಾಂತಾಬಾಯಿ ಎಂ ಖೇಡ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೂಪಾ ದೇವರನಾವದಗಿ ಜಿಲ್ಲಾಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿಜಯಪುರ ನಗರದ ಕ್ರೀಡಾಂಗಣದಲ್ಲಿ ಬಾಲಕ ಮತ್ತು ಬಾಲಕಿಯರ ಮೇಲಾಟ ಸ್ಪರ್ಧೆಗಳಲ್ಲಿ ಭಾಗವಹಿಸಿ, ಅದರಲ್ಲಿ 100 ಮೀ ಮತ್ತು 200 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಬರುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಹಾಗೂ ಖೇಡ ಶಾಲೆಯ ದೈ.ಶಿ ಪ್ರಕಾಶ ಐರೋಡಗಿ ಮಾಹಿತಿ ನೀಡಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ , ಕಾರ್ಯದರ್ಶಿ, ನಿರ್ದೇಶಕರು ಹಾಗೂ ಶಾಲಾ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ವಿಧ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದ್ದಾರೆ.

