ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಮಕ್ಕಳ ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವತ್ತ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನ.೨೦ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕಲಾವಿದರು-ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಅರ್ಜಿಯಲ್ಲಿ ಕಲಾಪ್ರಕಾರದ ವಿವರವನ್ನು ಸ್ಪಷ್ಟವಾಗಿ ನಮೂದಿಸಿ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ನಗರದ ಸ್ಟೇಷನ್ ರಸ್ತೆಯಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿ ಎಂದು ಪ್ರಕಟಣೆ ತಿಳಿಸಿದೆ.
