ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಶ್ರೀಸಿದ್ದೇಶ್ವರ ಸ್ವಾಮೀಜಿ ಪಿ.ಯು ಕಾಲೇಜು ವಿದ್ಯಾರ್ಥಿ ಅವಿನಾಶ ತಳಕೇರಿ ಇವನು ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಪಿ.ಯು ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದ ಚಕ್ರಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ವಿ.ಕೆ.ಪಾಟೀಲ, ಪ್ರಾಂಶುಪಾಲ, ತರಬೇತಿದಾರ, ಶಿಕ್ಷಕ ಸಿಬ್ಬಂದಿ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

