ಉದಯರಶ್ಮಿ ದಿನಪತ್ರಿಕೆ
ಚಡಚಣ: ಅಕ್ಷರ ನಾದ ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇವರು ಕೊಡಮಾಡುವ ಅಂತರಾಷ್ಟ್ರೀಯ ಐಮಾ ಅವಾರ್ಡ ಪ್ರಶಸ್ತಿಗೆ ಜಿಗಜೇವಣಿಯ ಗದ್ಯಾಳ ವಸ್ತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಮಾಳಪ್ಪ ವಾಘಮೋರೆ ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.
ಇತ್ತೀಚಿಗೆ ಬೆಂಗಳೂರಿನ ಜೆ.ಎಸ್.ಎಸ್ ಸಭಾ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಅಕ್ಷರ ನಾದ ಸಂಸ್ಥೆಯ ರಾಜ್ಯಾಧ್ಯಕ್ಷೆ ಹಾಗೂ ಸಂಸ್ಥಾಪಕಿ ಡಾ| ಶೃತಿ ಮಧೂಸುದರನ್ ಅವರು ಮಾಳಪ್ಪ ವಾಘಮೋರೆ ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

