ವಿಜಯಪುರ: ಪ್ರಸಕ್ತ ೨೦೨೨ನೇ ಸಾಲಿನಲ್ಲಿ ನೊಂದಣಿಯಾಗಿ ಎಂಫಿಲ್ ಹಾಗೂ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಫೆಲೋಶಿಪ್ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ಅಂಗೀಕೃತವಾದ ವಿಶ್ವವಿದ್ಯಾಲಯಳಲ್ಲಿ ಪೂರ್ಣಕಾಲಿಕವಾಗಿ ಪಿಎಚ್‌ಡಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ೩ ವರ್ಷಗಳ ಅವಧಿಗೆ ಹಾಗೂ ಎಂಫಿಲ್ ವ್ಯಾಸಂಗ್ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಜೆಆರ್‌ಎಫ್ ಮಾದರಿಯಲ್ಲಿ ೨ ವರ್ಷದ ಅವಧಿಗೆ ಪ್ರತಿ ತಿಂಗಳ ೨೫ ಸಾವಿರ ರೂ. ಮತ್ತು ಪ್ರವರ್ಷಕ್ಕೆ ಒಂದು ಬಾರಿ ೧೦ ಸಾವಿರ ರೂ. ನಿರ್ವಹಣಾ ವೆಚ್ಚ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೩೧-೧೦-೨೦೨೩ರವರೆಗೆ ವಿಸ್ತರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ದೃಢೀಕೃತ ಪ್ರತಿಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೯೫೫೨೩ ಸಂಖ್ಯೆಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment