Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಯಚೂರಿಗೆ ಏಮ್ಸ್ , ಪ್ರವಾಹ ಪರಿಹಾರಕ್ಕೆ ಸಿಎಂ ಮನವಿ
(ರಾಜ್ಯ ) ಜಿಲ್ಲೆ

ರಾಯಚೂರಿಗೆ ಏಮ್ಸ್ , ಪ್ರವಾಹ ಪರಿಹಾರಕ್ಕೆ ಸಿಎಂ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ | ಬಾಕಿಯಿರುವ ಹಲವು ಬೇಡಿಕೆಗಳ ಈಡೇರಿಕೆಗೆ ಮನವಿ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ.
ಸೋಮವಾರ ಸಂಜೆ ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2,100 ಕೋಟಿ ರೂ.ಗಳಿಗೂ ಹೆಚ್ಚು ಪ್ರವಾಹ ಪರಿಹಾರ ಬಿಡುಗಡೆ ಮತ್ತು ನಿರ್ಣಾಯಕ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ರಾಯಚೂರು ಜಿಲ್ಲೆಯು ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ತಲಾ ಆದಾಯದ ಮಟ್ಟದಲ್ಲಿ ಆರಂಭಿಕ ಹಂತದಲ್ಲಿದೆ. ದಲಿತರು ಹಾಗೂ ಹಿಂದುಳಿದ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಜನರಿಗೆ ಗುಣಮಟ್ಟದ ರೆಫರೆಲ್ ವೈದ್ಯಕೀಯ ಕೇಂದ್ರದ ಅಗತ್ಯತೆಯನ್ನು ಪೂರೈಸಲು ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆಯನ್ನು ನೀಡುವಂತೆ ಮನವಿಪತ್ರದಲ್ಲಿ ಕೋರಲಾಗಿದೆ ಎಂದರು.
ಕರ್ನಾಟಕ ಸರ್ಕಾರವು ರಾಯಚೂರಿನಲ್ಲಿ AIIMS ಸ್ಥಾಪನೆಗೆ ಅನುಮೋದನೆ ಕೋರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ವಿವರವಾದ ಯೋಜನಾ ವರದಿಯನ್ನು ಈಗಾಗಲೇ ಸಲ್ಲಿಸಿದೆ. ಯೋಜನೆಗೆ ಅವಶ್ಯವಾದ ಭೂಮಿಯ ಲಭ್ಯತೆ, ಸಂಪರ್ಕ ವ್ಯವಸ್ಥೆ ಮತ್ತು ಸ್ಥಳೀಯ ಆಡಳಿತದ ಬೆಂಬಲ ಸೇರಿದಂತೆ AIIMS ನಂತಹ ರಾಷ್ಟ್ರೀಯ ಮಟ್ಟದ ಸಂಸ್ಥೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಪೂರಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.

ಪ್ರವಾಹ ಪರಿಹಾರಕ್ಕೆ ಮನವಿ

​ರಾಜ್ಯದಲ್ಲಿ ಒಟ್ಟು 14,58,000 ಹೆಕ್ಟೇರ್​ ಬೆಳೆ ಹಾನಿಯಾಗಿದ್ದು, ಆ ಕುರಿತು ನಾವು ಜಂಟಿ ಸಮೀಕ್ಷೆ ಮಾಡಿಸಿದ್ದೇವೆ. ರಾಜ್ಯದಲ್ಲಿ ಒಟ್ಟು 3,560 ಕೋಟಿ ನಷ್ಟವಾಗಿದ್ದು, ಮಳೆಯಿಂದಾಗಿ ಮೂಲಸೌಕರ್ಯಗಳಿಗೂ ಹಾನಿಯಾಗಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ಮನವರಿಕೆ ಮಾಡಿದ್ದೇವೆ. ಇದಲ್ಲದೇ ಸಾವಿರಾರ ಮನೆಗಳು, ರಸ್ತೆ ಹಾಗೂ ಶಾಲೆ ಗಳು ಹಾನಿಗೀಡಾಗಿದ್ದು ಎನ್.ಡಿ.ಆರ್ ಎಫ್ ವತಿಯಿಂದ ಪರಿಹಾರವನ್ನು ಕೋರಿ ಎರಡು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ 2,136 ಕೋಟಿ ರೂ.ಗಳ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಿಎಂ ಆಗ್ರಹಿಸಿದರು.

ಪ್ರಮುಖ ನೀರಾವರಿ ಯೋಜನೆಗಳು

ರಾಜ್ಯದ ಪ್ರಮುಖ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರದಿಂದ ಬಾಕಿ ಇರುವ ತೀರುವಳಿಗಳನ್ನು ದೊರಕಿಸಲು ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು. ಪ್ರಧಾನಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಸಮತೋಲನ ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ತಿರುವಳಿಗಳನ್ನು ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶಿಸಬೇಕು ಎಂದರು.

bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.