ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.
ನಗರದ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಇವರು ನೂತನ ಅಧ್ಯಕ್ಷ ಅಶೋಕ ಯಡಳ್ಳಿ, ಉಪಾಧ್ಯಕ್ಷ ಶಶಿ ಮೆಂಡೆಗಾರ, ಖಜಾಂಜಿ ರಾಹುಲ್ ಆಪ್ಟೆ ಹಾಗೂ ಕಾರ್ಯಕಾರಣಿ ಸದಸ್ಯ ಗುರುರಾಜ ಗದ್ದನಕೇರಿ ಇವರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಈ ವೇಳೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯಕುಮಾರ ಸಾರವಾಡ, ಪ್ರಿನ್ಸಿಪಲ್ ಅಭಿಜಿತ ಗಾಯಕವಾಡ, ಶಿಕ್ಷಕರಾದ ಗಜಾನನ ಕಾಳೆ, ಪ್ರಲ್ಹಾದ ಹೂಗಾರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

