ಉದಯರಶ್ಮಿ ದಿನಪತ್ರಿಕೆ
ಇಂಡಿ: ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣೆ ಚಿಕಿತ್ಸಾ ಶಿಬಿರ ನ. ೧೯ ರಂದು ಮುಂಜಾನೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಪಾಟೀಲ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲೂಕ ಸರಕಾರಿ ಆಸ್ಪತ್ರೆ ಮತ್ತು ಸ್ಪಂದನಾ ಆಸ್ಪತ್ರೆ ಇಂಡಿ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣೆ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡಿದ್ದು, ಸದರಿ ಶಿಬಿರದಲ್ಲಿ ರಕ್ತದ ಗುಂಪು ತಪಾಸಣೆ, ರಕ್ತದ ಒತ್ತಡ, ಸಕ್ಕರೆ ಕಾಯಲೆ, ಸಾಮಾನ್ಯ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮುಂತಾದ ಸೇವೆಗಳು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಇಂಡಿಯ ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಶಿಬಿರದಲ್ಲಿ ತಾಲೂಕು ವೈದ್ಯಾಧಿಕಾರಿಗಳು ಇಂಡಿ
ಡಾ. ರಾಜೇಶ ಕೊಳೆಕರ, ಡಾ.ರಾಮಕೃಷ್ಣ ಇಂಗಳೆ, ಡಾ.ಜಗದೀಶ ಬಿರಾದಾರ ,ಡಾ.ಲಕ್ಷ್ಮಿಕಾಂತ ಮೇತ್ರಿ , ಡಾ.ಆದರ್ಶ ಪ್ರಭಾಕರ ಬಗಲಿ , ಡಾ.ಸುಧೀರ ಚವ್ಹಾಣ ಪಾಲ್ಗೊಳ್ಳುವರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮತ್ತಿತರಿದ್ದರು.
