ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ ಸಂಯುಕ್ತಾಶ್ರಯದಲ್ಲಿ ವಿಶ್ವ ಮೂಲವ್ಯಾಧಿ ದಿನಾಚರಣೆಯ ಅಂಗವಾಗಿ ನವೆಂಬರ್ 20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ನಗರದ ಗಾಂಧಿಚೌಕಿನಿಂದ ಗಗನ ಮಹಲ ವರೆಗೆ ವಾಕಥಾನ್ ನಡೆಯಲಿದೆ. ನಂತರ ಗಗನಮಹಲ್ ಉದ್ಯಾನದಲ್ಲಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗ ಓಪಿಡಿ ಸಂಖ್ಯೆ 10ರಲ್ಲಿ ಮೂಲವ್ಯಾಧಿ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ಆಯೋಜಿಸಲಾಗಿದೆ.
ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ, ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
