ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಈ ಬಾರಿ ಸಚಿವ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಧಿಕ ಸುಂಬಡ ಆಗ್ರಹಿಸಿದರು.
ಕಳೆದ 20 ವರ್ಷಗಳ ಬಳಿಕ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದು ಅವರಿಂದ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದ್ದು. ಜಿಲ್ಲೆಯ ಗಡಿಭಾಗದ ಸಿಂದಗಿ ಮತಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದು ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲು ಸಚಿವ ಸ್ಥಾನ ನೀಡಿದರೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದಂತೆ ಆಗುತ್ತದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ ಸಿಂದಗಿ ಕ್ಷೇತ್ರಕ್ಕೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಿದಂತಾಗುತ್ತದೆ ಅದಕ್ಕಾಗಿ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದರು.

