ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಸಾತಿಹಾಳ ಗ್ರಾಮದ ಸಮಾಜಸೇವಕ ಪ್ರಕಾಶ ಡೋಣೂರ ಇವರನ್ನು ಬಸವೋತ್ಸವ ಹಾಗೂ ಅಥಣಿ ಮುರುಘೇಂದ್ರ ಶಿವಯೋಗಿಗಳ ಜಯಂತ್ಯುತ್ಸವದಲ್ಲಿ ಸನ್ಮಾನಿಸಲಾಯಿತು.
ಬೆಂಗಳೂರಿನ ವಿಜಯನಗರ ಹಂಪಿ ಕ್ರೀಡಾಂಗಣದಲ್ಲಿ ಸುಕ್ಷೇತ್ರ ಶ್ರೀಗಚ್ಚಿನಮಠ, ಹಾಗೂ ರಾಷ್ಟ್ರೀಯ ಬಸವತತ್ವ ಪರಿಷತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಥಣಿ ಶಿವಬಸವಶ್ರೀಗಳ ನೇತೃತ್ವದಲ್ಲಿ ಇತ್ತೀಚಿಗೆ ಜರುಗಿದ ಮೂರು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸುವ ಸಂದರ್ಭದಲ್ಲಿ ತಾಲ್ಲೂಕಿನ ಸಮಾಜ ಸೇವಕ ಪ್ರಕಾಶ ಡೋಣುರ ಸಾಧನೆ ಗುರುತಿಸಿ ಆಯ್ಕೆ ಮಾಡಲಾಗಿತ್ತು.
ಮೈಸೂರು ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಮಡಿವಾಳ ಗುರು ಪೀಠದ ಬಸವ ಮಾಚಿದೇವ ಸ್ವಾಮೀಜಿ ಸಹಿತ ರಾಜಕೀಯ ಗಣ್ಯರು ಇದ್ದರು.

