ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ವತಿಯಿಂದ ಆಯೋಜಿಸಲಾದ ವಿಜಯಪುರ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಿಂದಗಿ ಮತಕ್ಷೇತ್ರದ ಬಳಗಾನೂರ ಗ್ರಾಮದ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ,
ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಜಾನಪದ ಕವಿ ಆದರ್ಶ ಶಿಕ್ಷಕಿ ಗಿರಿಜಾ ಅಳ್ಳಗಿ ಅವರು ನೀಡಿರುವ ಮಾರ್ಗದರ್ಶನದಲ್ಲಿ ಶಾಲಾ ಮುದ್ದು ಮಕ್ಕಳು ತಮ್ಮ ಸುಂದರ ಕಲಾ ಪ್ರದರ್ಶನ ಮಾಡಿ ಶಾಲೆಯ ಕೀರ್ತಿ ತಂದಿರುವದು ಹೆಮ್ಮೆಯ ವಿಷಯವಾಗಿದೆ ಎಂದು ಹಿರಿಯ ಕವಿ ಶಿಕ್ಷಕ ರಾಚು ಕೊಪ್ಪ ತಿಳಿಸಿದರು.
ವಿದ್ಯಾರ್ಥಿಗಳ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ, ಕ್ಷೇತ್ರ ಸಮನ್ವಾಧಿಕಾರಿ ಆಯ್.ಎಸ್.ಟಕ್ಕೆ ಶಾಲಾ ಮುಖ್ಯೋಪಾಧ್ಯಾಯ ಎಸ್.ಎಚ್.ಬಿರಾದಾರ ಸೇರಿದಂತೆ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

