ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನ ಸಾಧಕರಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.
ವಿಶ್ವ ವಿಕಲಚೇತನರ ದಿನಾಚರಣೆ-೨೦೨೫ರ ಕಾರ್ಯಕ್ರಮದಲ್ಲಿ ತಾಲೂಕಿಗೊಬ್ಬರಂತೆ ವಿಕಲಚೇತನ ಸಾಧಕರಿಗೆ ಸನ್ಮಾನಿಸಲಾಗುವುದು. ನವೆಂಬರ್ ೨೫ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
