Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನ ಬಾಗೇವಾಡಿ ತಾಲೂಕಿಗೆ ಭೇಟಿ ನೀಡಿದ ಡಿಸಿ ಡಾ.ಆನಂದ ಕೆ
(ರಾಜ್ಯ ) ಜಿಲ್ಲೆ

ಬಸವನ ಬಾಗೇವಾಡಿ ತಾಲೂಕಿಗೆ ಭೇಟಿ ನೀಡಿದ ಡಿಸಿ ಡಾ.ಆನಂದ ಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಬಸವನ ಬಾಗೇವಾಡಿ ತಾಲೂಕಿನ ವಿವಿಧ ಕಚೇರಿಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.
ತಾಲೂಕು ಆಡಳಿತ ಸೌಧದಲ್ಲಿರುವ ಭೇ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದ ಪ್ರಗತಿ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ವಿಭಾಗಗಳ ಬಾಕಿಯಿರುವ ಕಡತ-ವಹಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕಚೇರಿ ಕಾರ್ಯ ನಿಮಿತ್ತ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿದ್ದು, ಸಕಾಲದಲ್ಲಿ ಅವರ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಡಲು ಸೂಚನೆ ನೀಡಿದರು.
ಅಟಲಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ,ಕಡತಗಳ ವಿಲೇವಾರಿ ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಕಂದಾಯ ಇಲಾಖೆಯ ಭೂ ಸುರಕ್ಷಾ ಕಾರ್ಯದ ಆಧುನಿಕ ಅಭಿಲೇಖಾಲಯಕ್ಕೆ ಭೇಟಿ ನೀಡಿ, ಕಡತ-ವಹಿಗಳ ಸ್ಕ್ಯಾನಿಂಗ್ ಅಪಲೋಡಿಂಗ್ ಹಾಗೂ ಡಾಟಾ ಎಂಟ್ರಿ ಹಾಗೂ ಶಿರಸ್ತೇದಾರರ ಅನುಮೋದನೆ ಕುರಿತು ಪರಿಶೀಲಿಸಿ ಡಿಜಿಟಲ್ ದಾಖಲೆಗಳ ವಿತರಣೆಯ ಕುರಿತು ಪರಿಶೀಲಿಸಿ, ಸಾರ್ವಜನಿಕರಿಗೆ ಅನುಕೂಲಕರವಾಗುವ ದೃಷ್ಟಿಯಿಂದ ಪ್ರತಿ ನಿತ್ಯ ೧೫೦೦೦-೨೦೦೦೦ ಪುಟಗಳ ಸ್ಕ್ಯಾನಿಂಗ್ ಕಾರ್ಯ ನಿರ್ವಹಿಸುವಂತೆಯೂ ಹಾಗೂ ಸ್ಕ್ಯಾನಿಂಗ್ ಕಾರ್ಯವನ್ನು ಡಿಸೆಂಬರ್ ಮಾಹೆಯ ಅಂತ್ಯಕ್ಕೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಆಡಳಿತ ಸೌಧದಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿ, ಉಪ ನೋಂದಣಾಧಿಕಾರಿಗಳ ಕಚೇರಿಗೆ ಹಾಗೂ ಆಡಳಿತ ಸೌಧದಲ್ಲಿರುವ ಎಲ್ಲ ಕಚೇರಿ ಹಾಗೂ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಸ್ವೀಕೃತವಾಗುತ್ತಿರುವ ಅರ್ಜಿ ಹಾಗೂ ವಿಲೇವಾರಿ ಕುರಿತು ಪರಿಶೀಲನೆ ಮಾಡಿದರು.
ಪುರಸಭೆಯ ವ್ಯಾಪ್ತಿಯ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಹಸಿ ಕಸ ಒಣ ಕಸ ವಿಂಗಡಿಸಿ ವಿಲೇವಾರಿ ಕ್ರಮಕ್ಕೆ ಪುರಸಭೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಂಗನವಾಡಿ ಕೇಂದ್ರಕ್ಕೆ ಸ್ವೀಕೃತವಾಗುತ್ತಿರುವ ಆಹಾರ ಸಾಮಗ್ರಿ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ನಿಯಮಿತವಾಗಿ ಆಹಾರ ವಿತರಣೆ ಮಾಡುತ್ತಿರುವ ಕುರಿತು ಪರಿಶೀಲಿಸಿದ ಅವರು, ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿ, ಒಪಿಡಿ ವಿಭಾಗ, ಆಪರೇಶನ್ ಥೇಟರ್, ಡೆಂಟಲ್ ವಿಭಾಗ, ಔಷಧಗಳ ವಿತರಣೆ, ಆಕ್ಸಿಜನ್ ಘಟಕವನ್ನು ಪರಿಶೀಲಿಸಿದರು.
ಆಸ್ಪತ್ರೆಯ ಸ್ವಚ್ಛತೆ ಹಾಗೂ ಅಗತ್ಯ ಆರೋಗ್ಯ ಸೇವೆಗಳ ಕುರಿತ ಅಗತ್ಯ ಸಲಹೆ ಹಾಗೂ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ವೈ ಎಸ್ ಸೋಮನಕಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.