ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ’ನನ್ನ ನಾಡು’ ಪತ್ರಿಕೆ ಬಳಗದಿಂದ ಸನ್ಮಾನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಅಶೋಕ ಯಡಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಅವರು ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಅಭಿವೃದ್ಧಿಪಡಿಸಲು ಪಣ ತೊಡಬೇಕೆಂದು ಹಿರಿಯ ಪತ್ರಕರ್ತ ಹಾಗೂ ’ನನ್ನ ನಾಡು’ ದಿನಪತ್ರಿಕೆ ಸಂಪಾದಕ ಮಾಧವರಾವ್ ಕುಲಕರ್ಣಿ ಸಲಹೆ ನೀಡಿದರು.
ನಗರದ ಕನಕದಾಸ ಬಡಾವಣೆಯ ತಮ್ಮ ಕಾರ್ಯಾಲಯದಲ್ಲಿ ಕಾನಿಪ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಇಂದು ನಮಗೆಲ್ಲ ದೊರೆತ ಈ ಸನ್ಮಾನ ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ನಮಗೆಲ್ಲ ಶುಭಹಾರೈಸಿ ಸನ್ಮಾನಿಸಿದ ಮಾಧವರಾವ್ ಕುಲಕರ್ಣಿ ಸೇರಿದಂತೆ ಹಿರಿಯ ಪತ್ರಕರ್ತರು ಕಾನಿಪ ಸಂಘದ ಆಸ್ತಿಯಾಗಿದ್ದಾರೆ. ಅವರ ಸಲಹೆ-ಸೂಚನೆ ನಮಗೆಲ್ಲ ಸದಾ ಅವಶ್ಯಕ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಹಿರಿಯ ಪತ್ರಕರ್ತರನ್ನು, ಹಿತೈಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಮಾರ್ಗದರ್ಶನದಲ್ಲಿ ಸಂಘದ ಏಳ್ಗೆಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರಲ್ಲದೆ, ಸಂಘದ ಸದಸ್ಯರಿಗಾಗಿ ಉಪಯುಕ್ತ ಯೋಜನೆಗಳನ್ನು ಹಾಕಿಕೊಂಡಿರುವುದಾಗಿ ತಿಳಿಸಿದರು.
’ನನ್ನ ನಾಡು’ ಪತ್ರಿಕಾ ಬಳಗ ಹಾಜರಿದ್ದರು.

ಕಾನಿಪ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಸಮೀರ ಇನಾಮದಾರ, ಖಜಾಂಚಿ ರಾಹುಲ್ ಆಪ್ಟೆ, ಕಾರ್ಯದರ್ಶಿಗಳಾದ ಅವಿನಾಶ ಬಿದರಿ, ವಿನೋದ ಸಾರವಾಡ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರುರಾಜ ಗದ್ದನಕೇರಿ, ಸುರೇಶ ತೆರದಾಳ, ಚಿದಂಬರ ಬಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಶ್ರೀನಿವಾಸ ಡಿ. ಸೂರಗೊಂಡ, ಗೋಪಾಲ ಜಿ. ಕನಿಮಣಿ, ಕಲ್ಲಪ್ಪ ಶಿವಶರಣ, ಪ್ರಭು ಕುಮಟಗಿ ಅವರನ್ನು ಮಾಧವರಾವ್ ಕುಲಕರ್ಣಿ ಮತ್ತು ಅವರ ಪುತ್ರ ಪವನ ಕುಲಕರ್ಣಿ ಸನ್ಮಾನಿಸಿ ಗೌರವಿಸಿದರು.

