ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಬಸವೆಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಿಡಗುಂದಿಯ ಗ್ರಾಮಿಣ ವಿಧ್ಯಾವರ್ಧಕ ಸಂಘದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಪಿಯು ಕಾಲೇಜುಗಳ ಜಿಲ್ಲಾ ಮಟ್ಟದ ಸೌಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕಾವೇರಿ ಪತ್ತಾರ ಪೃಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಜಾನಪದ ನೃತ್ಯ ಸ್ಪರ್ಧೆಯಲ್ಲಿ ಐಶ್ವರ್ಯ ರಾಠೋಡ ಮತ್ತು ಸಂಗಡಿಗರಾದ ಪೂಜಾ ಸಾಲುಂಕೆ, ಶ್ರೀದೇವಿ ಪವಾರ, ರಕ್ಷೀತಾ ತಳವಾರ, ಸೌಭಾಗ್ಯ ಹೊಸಮನಿ (ಗುಂಪು ನೃತ್ಯ) ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಧ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರಾದ ಶ್ರೀ ಬಿ ಜಿ ಚನಗೊಂಡ ಅಭಿನಂದಿಸಿ ಮಾತನಾಡಿ, ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವದ ಮೂಲಕ ಪಿಯು ಕಾಲೇಜುಗಳ ವಿಭಾಗಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದು ಸಂತಸ ತಂದಿದ್ದು ಮಕ್ಕಳಿಗೆ ಪಠ್ಯದ ಜೋತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನಿಡಬೇಕು ಎಂದು ಈ ಸಂದರ್ಭದಲ್ಲಿ ಹೆಳಿದರು.
ಈ ವೇಳೆ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಡಾ.ಜಿ ಜಿ ಮೇಡೆದಾರ, ತರಬೇತುದಾರ ಬಸವರಾಜ್ ಕುಂಬಾರ, ಉಪನ್ಯಾಸಕ ರವಿಕುಮಾರ ಗುಮಶೆಟ್ಟಿ, ಗೌಡಪ್ಪ ಹದರಿ, ವಿರೇಶ ಝಳಕಿ ಸೇರಿದಂತೆ ಇತರರು ಇದ್ದರು.

