ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಂಜಾರಾ ಪ್ರೌಢ ಶಾಲೆಗೆ ಬುಧವಾರದಂದು ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿ, ಡಯಟ್ ಉಪನ್ಯಾಸಕರಾದ ಎ.ಆರ್.ಮುಜಾವರ ಹಾಗೂ ಸಿಆರ್‌ಸಿ ಬಿ.ಎ.ಬಿರಾದಾರರ ಅವರು ಭೇಟಿ ನೀಡಿ ೨೦೨೫-೨೬ ನೇ ಶೈಕ್ಷಣಿಕ ಸಾಲಿಗೆ ರಾಜ್ಯ ಪಠ್ಯಕ್ರಮದ ೮ ರಿಂದ ೧೦ ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿರುವ ಪಾಠ ಆಧಾರಿತ ಮೌಲ್ಯಾಂಕನ ಪ್ರಶ್ನೆಕೋಠಿಯನ್ನು(ಎಲ್.ಬಿ.ಎ) ಬಳಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಸಾಧಿಸಿರುವ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿಯವರು. ವಿದ್ಯಾರ್ಥಿಗಳ ಕಲಿಕೆಯನ್ನು ಸುಧಾರಿಸಲು ಹಾಗೂ ಪ್ರತಿ ಪಾಠದ ನಂತರ ಮಗುವಿನ ಕಲಿಕೆಯನ್ನು ದೃಢೀಕರಿಸಿಕೋಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುತ್ತದೆ. ವಿದ್ಯಾರ್ಥಿಗಳ ಕಲಿಕೆಯನ್ನು ನಿರಂತರವಾಗಿ ಮೇಲ್ವೀಚಾರಣೆ ಮಾಡಿ, ಪ್ರತಿ ಹಂತದ ವಿದ್ಯಾರ್ಥಿಯ ಕಲಿಕೆಯನ್ನು ಪೋಷಕರ ಗಮನಕ್ಕೆ ತರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ಎ.ಎಂ.ನಾಗೊAಡ, ಆರ್.ವ್ಹಿ.ಭುಜಂಗನವರ, ಎಸ್.ಬಿ.ಒಡೆಯರ, ಜೆ.ಕೆ.ರಾಠೋಡ, ಎಸ್.ಡಿ.ಚವ್ಹಾಣ್, ಎಸ್.ಕೆ.ಶಿಂಧೆಯವರುಗಳು ಸೇರಿದಂತೆ ಸಹ ಶಿಕ್ಷಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

