ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಸೂರ್ಯ ಫೌಂಡೇಶನ್ ಹಾಗೂ ಸ್ಟಾರ್ಕ್ ಅಕಾಡೆಮಿ (ರಿ) ಬೆಂಗಳೂರು ಇವರು ಕೊಡಮಾಡುವ ರಾಜ್ಯ ಮಟ್ಟದ ಶಿಕ್ಷಣ ಸಿಂಧು ರಾಜ್ಯ ಪ್ರಶಸ್ತಿಗೆ ತಾಲೂಕಿನ ಮುಳವಾಡ ಗ್ರಾಮದ ಜನತಾ ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀಶೈಲ ಬಸಪ್ಪ ವಂದಾಲ ಅವರನ್ನು ಆಯ್ಕೆ ಮಾಡಲಾಗಿದೆ.
2025-26ನೇ ಸಾಲಿನ ‘ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ’ದಲ್ಲಿ ‘ಶಿಕ್ಷಣ ಸಿಂಧು’ ರಾಜ್ಯ ಪ್ರಶಸ್ತಿ ನೀಡಲು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಸಾಧಕರಾಗಿ ವಿಶಿಷ್ಟ ಶಿಕ್ಷಕರಾಗಿ, ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರನ್ನು ಗುರುತಿಸಿ ನವೆಂಬರ 23 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪೂರ್ಣಿಮ ಡಿ.ಎನ್ ಹಾಗೂ ಸೋಮೇಶ್ ನವೋದಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

