Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಿಎಂ ವಿಫಲ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಿಎಂ ವಿಫಲ :ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಣ್ಣ ಅವರ ಸರ್ಕಾರ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದೆ. ನಿಮ್ಮ ಈ ದರಿದ್ರ ರಾಜಕಾರಣದಿಂದ ಕರ್ನಾಟಕ ಜನತೆ ಶಾಪವಾಗಿ ಪರಿಗಣಿಸಿದೆ, ಇನ್ನು ಗೃಹ ಸಚಿವರು ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಕಡು ಶಬ್ದಗಳಲ್ಲಿ ಟೀಕಿಸಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಸಂಪೂರ್ಣ ಹಾಳಾಗಿದೆ, ಹಾಡುಹಗಲೇ ಕೊಲೆ, ಸುಲಿಗೆ ನಡೆಯುತ್ತಿವೆ. ಬೆಂಗಳೂರಿನಲ್ಲಿಯೇ ಹಾಡು ಹಗಲೇ ಏಳು ಕೋಟಿ ರೂ. ದೋಚಲಾಗಿದೆ, ವಿಜಯಪುರದಲ್ಲಿ ಎರಡು ಬ್ಯಾಂಕುಗಳು ದರೋಡೆಯಾಗಿ ೧೦೦ ಕೋಟಿ ರೂ.ಗೂ ಅಧಿಕ ಸ್ವೊತ್ತು ಕಳ್ಳತನವಾಗಿದೆ, ಒಟ್ಟಾರೆಯಾಗಿ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ದಿನ ಬೆಳಗಾದರೆ ಈ ರೀತಿಯ ಬೆಚ್ಚಿಬೀಳಿಸುವ ಘಟನೆಗಳು ಸಾಮಾನ್ಯವಾಗಿವೆ, ಪ್ರತಿಯೊಬ್ಬರು ಮನೆಯಿಂದ ಹೊರಬರಲು ಅಂಜುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಅತ್ತ ಉಗ್ರಗಾಮಿಗಳಿಗೆ ಜೈಲಿನಲ್ಲಿ ಆತಿಥ್ಯ ನೀಡಲಾಗುತ್ತಿದೆ, ಹೊರಗಡೆ ಅಪರಾಧಿಕ ಕೃತ್ಯಗಳು ವ್ಯಾಪಕವಾಗಿವೆ, ಇವುಗಳನ್ನು ತಡೆಗಟ್ಟುವಲ್ಲಿ ರಾಜ್ಯದ ಹೋಂ ಮಿನಿಸ್ಟರ್ ಸಂಪೂರ್ಣ ವೈಫಲ್ಯವಾಗಿ ವೇಸ್ಟ್ ಮಿನಿಸ್ಟರ್ ಆಗಿದ್ದಾರೆ ಎಂದು ಜಿಗಜಿಣಗಿ ಹೇಳಿದ್ದಾರೆ.
ತಮ್ಮ ಸಂಸ್ಥೆಗಳಿಗೆ ಉತ್ತಮ ಆಡಳಿತಗಾರರಾಗಿರುವ ಡಾ.ಜಿ. ಪರಮೇಶ್ವರ ಗೃಹ ಸಚಿವರಾಗಿ ಸಂಪೂರ್ಣ ವೈಫಲ್ಯ ಕಂಡಿದ್ದಾರೆ, ಈ ಎಲ್ಲ ಅಪರಾಧಿಕ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇಷ್ಟೆಲ್ಲಾ ಸಮಸ್ಯೆಗಳು ಎದುರಿಸುತ್ತಿದ್ದರೂ ಸಹ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಕೇವಲ ರಾಜಕಾರಣಕ್ಕೆ ಆದ್ಯತೆ ನೀಡುತ್ತಿದೆ, ಅವರ ಈ ದರಿದ್ರ ನಡವಳಿಕೆಯಿಂದ ಜನತೆ ನರಕಯಾತನೆ ಅನುಭವಿಸುವಂತಾಗಿದೆ ಎಂದರು.
ರಾಜ್ಯದಲ್ಲಿ ರಸ್ತೆಗಳು ಹಾಳಾಗಿ ಹೋಗಿವೆ, ಈ ಬಗ್ಗೆ ಸಣ್ಣ ಬಾಲಕನೋರ್ವ ಪ್ರಧಾನಿಗೆ ಪತ್ರ ಬರೆಯುವಂತಾಗಿದೆ, ಬಿಹಾರ್ ಮಾದರಿಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗುವುದಂತೂ ದಿಟ್ಟ ಸತ್ಯ, ರಾಜ್ಯದಲ್ಲಿ ಇನ್ನಷ್ಟೂ ಕಾನೂನು-ಸುವ್ಯವಸ್ಥೆ ಬಿಗಡಾಯಿಸುವ ಮುನ್ನವೇ ಎಚ್ಚೆತ್ತುಕೊಳ್ಳಿ, ಕೇವಲ ಒಂದು ಸಮುದಾಯ ಖುಷಿ ಪಡಿಸಲು ಉಳಿದ ಸಮಾಜಗಳನ್ನು ತುಳಿಯುವ ಹಾಗೂ ಅವರನ್ನು ತೊಂದರೆಗೆ ತಳ್ಳುವ ಕೆಲಸ ಮಾಡಬೇಡಿ ಎಂದು ಅವರು ಹೇಳಿದ್ದಾರೆ.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.